ಬೆಂಗಳೂರು: ಕಾಂಗ್ರೆಸ್ ಸರ್ಕಾರ ಉರುಳಿಸಲು 1000 ಕೋಟಿ ರೂಪಾಯಿ ಹಣ ಇಟ್ಟುಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ.
ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ದೂರು ನೀಡಿದ್ದು, ಯತ್ನಾಳ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.
ಇನ್ನು 1000 ಕೋಟಿ ರೂ ಹಣದ ಮೂಲ ಯಾವುದು? ಈ ಬಗ್ಗೆ ಯತ್ನಾಳ್ ಅವರನ್ನು ವಿಚಾರಣೆಗೆ ಒಳಪಡಿಸಿದರೆ ಎಲ್ಲಾ ಸತ್ಯಾಂಶ ಹೊರಬರಲಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದೆ.