ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ.
ಅಮೇರಿಕಾಗೆ ಭೇಟಿ ನೀಡಿದ್ದ ವೇಳೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು, ಜಾತಿಯ ಕುರಿತು ಹೇಳಿಕೆ ನೀಡಿದ್ದರು.
ಈ ಹೇಳಿಕೆ ಖಂಡಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದ್ದರು. ರಾಹುಲ್ ಗಾಂಧಿ ಹುಟ್ಟಿನ ಬಗ್ಗೆ ಲಘುವಾಗಿ ಮಾತನಾಡಿದ್ದರು.
ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಡಿಜಿಪಿಗೆ ದೂರು ನೀಡಿದ್ದಾರೆ. ಯತ್ನಾಳ್ ಅವರು ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.