Mysore
25
overcast clouds
Light
Dark

ಪೆನ್‌ಡ್ರೈವ್‌ ಪ್ರಕರಣ: ಎಚ್‌ಡಿಕೆ ವಿರುದ್ಧ ಎಸ್‌ಐಟಿಗೆ ದೂರು ನೀಡಿದ ಕಾಂಗ್ರೆಸ್‌

ಬೆಂಗಳೂರು: ಪೆನ್‌ಡ್ರೈವ್‌ ಪ್ರಕರಣ ಹಾಗೂ ಎಚ್‌ಡಿ ರೇವಣ್ಣ ಬಂಧನ ಪ್ರಕರಣದಲ್ಲಿ ಎಚ್‌ಡಿ ಕುಮಾರಸ್ವಾಮಿ ಸಂತ್ರಸ್ತೆಯರಿಗೆ ಬೆದರಿಕೆ ಹಾಗೂ ತನಿಖೆಯ ದಿಕ್ಕು ತಪ್ಪಿಸಲು ಮುಂದಾಗಿದ್ದಾರೆ ಎಂದು ಕಾಂಗ್ರೆಸ್‌ ಎಸ್‌ಐಟಿಗೆ ದೂರು ದಾಖಲಿಸಿದೆ.

ಈ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಹೀಗಿರುವಾಗಿ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರು ಈ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಪರೋಕ್ಷವಾಗಿ ರಕ್ಷಿಸುತ್ತಿದ್ದಾರೆ ಹಾಗೂ ಸಂತ್ರಸ್ತರ ಸ್ಥಳಗಳನ್ನು ಬಹಿರಂಗ ಪಡಿಸುತ್ತಿದ್ದಾರೆ. ಹೀಗಾಗಿ ಯಾರೂ ದೂರು ನೀಡಲು ಮುಂದೆ ಬರುತ್ತಿಲ್ಲ ಎಂದು ದೂರಿನಲ್ಲಿ ಹೇಳಿದ್ದಾರೆ.

ಈ ಪ್ರಕರಣದಲ್ಲಿ ಎಚ್‌ಡಿ ಕುಮಾರಸ್ವಾಮಿ ಅವರ ಬಳಿಯಲ್ಲಿ ಹೆಚ್ಚಿನ ಮಾಹಿತಿಗಳಿದ್ದು, ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ.

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌ಡಿ ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಹಲವಾರು ಮಹಿಳೆಯರು ಬಲಿಯಾಗಿದ್ದಾರೆ ಎಂದು ಕಾಂಗ್ರೆಸ್‌ ತನ್ನ ದೂರಿನಲ್ಲಿ ಉಲ್ಲೇಖಿಸಿದೆ.