ಬೆಂಗಳೂರು: ಪೆನ್‌ಡ್ರೈವ್ ಪ್ರಕರಣ ಹಾಗೂ ಎಚ್‌ಡಿ ರೇವಣ್ಣ ಬಂಧನ ಪ್ರಕರಣದಲ್ಲಿ ಎಚ್‌ಡಿ ಕುಮಾರಸ್ವಾಮಿ ಸಂತ್ರಸ್ತೆಯರಿಗೆ ಬೆದರಿಕೆ ಹಾಗೂ ತನಿಖೆಯ ದಿಕ್ಕು ತಪ್ಪಿಸಲು ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ಎಸ್‌ಐಟಿಗೆ ದೂರು ದಾಖಲಿಸಿದೆ.
ಈ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಹೀಗಿರುವಾಗಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಈ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಪರೋಕ್ಷವಾಗಿ ರಕ್ಷಿಸುತ್ತಿದ್ದಾರೆ ಹಾಗೂ ಸಂತ್ರಸ್ತರ ಸ್ಥಳಗಳನ್ನು ಬಹಿರಂಗ ಪಡಿಸುತ್ತಿದ್ದಾರೆ. ಹೀಗಾಗಿ ಯಾರೂ ದೂರು ನೀಡಲು ಮುಂದೆ ಬರುತ್ತಿಲ್ಲ ಎಂದು ದೂರಿನಲ್ಲಿ ಹೇಳಿದ್ದಾರೆ.
ಈ ಪ್ರಕರಣದಲ್ಲಿ ಎಚ್‌ಡಿ ಕುಮಾರಸ್ವಾಮಿ ಅವರ ಬಳಿಯಲ್ಲಿ ಹೆಚ್ಚಿನ ಮಾಹಿತಿಗಳಿದ್ದು, ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಎಚ್‌ಡಿ ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಹಲವಾರು ಮಹಿಳೆಯರು ಬಲಿಯಾಗಿದ್ದಾರೆ ಎಂದು ಕಾಂಗ್ರೆಸ್ ತನ್ನ ದೂರಿನಲ್ಲಿ ಉಲ್ಲೇಖಿಸಿದೆ.
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…
ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…
ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…