ಹಾಸನ: ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಇಂದು (ಡಿ.5) ಜನಕಲ್ಯಾಣ ಸಮಾವೇಶದ ಮೂಲಕ ಕಾಂಗ್ರೆಸ್ ಪಕ್ಷ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದೆ.
ರಾಜ್ಯದಲ್ಲಿ ಉಪಚುನಾವಣೆಯ ಯಶಸ್ಸಿನ ನಂತರ ಕಾಂಗ್ರೆಸ್, ಜೆಡಿಎಸ್- ಬಿಜೆಪಿಗೆ ಠಕ್ಕರ್ ಕೊಡಲು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಈ ಸಮಾವೇಶ ಪಕ್ಷದ ಮೈಲೇಜ್ ಹೆಚ್ಚಿಸುವಲ್ಲಿ ಪಾತ್ರ ವಹಿಸಲಿದೆ.
6 ಜಿಲ್ಲೆಗಳನ್ನೊಳಗೊಂಡ ದೊಡ್ಡ ಸಮಾವೇಶ ಇದಾಗಿದೆ. ಮೈಸೂರು ಜಿಲ್ಲೆಯ ಹನ್ನೊಂದು ವಿಧಾನಸಭೆ ಕ್ಷೇತ್ರಗಳಿಂದ 3 ಲಕ್ಷಕ್ಕೂ ಅಧಿಕ ಜನ ಈ ಸಮಾವೇಶದಲ್ಲಿ ಭಾಗಿಯಾಗುವ ಸಾಧ್ಯತೆಯಿದ್ದು, ಸುಮಾರು 1000 ಕ್ಕಿಂತಲೂ ಹೆಚ್ಚು ಬಸ್‌ಗಳು ಮೈಸೂರು ಜಿಲ್ಲೆಯಿಂದ ಕಾರ್ಯಕ್ರಮಕ್ಕೆ ಹೊರಟಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಿಂದಲೇ ಐವತ್ತು ಸಾವಿರಕ್ಕೂ ಹೆಚ್ಚು ಜನ ಸಮಾವೇಶಕ್ಕೆ ತೆರಳಿದ್ದಾರೆ.
ದಿನ ನಿತ್ಯವು ಬಿಜೆಪಿ- ಜೆಡಿಎಸ್, ಕಾಂಗ್ರೆಸ್ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡುವ ಮುಖಾಂತರ ED, CBI, ಲೋಕಾಯುಕ್ತ ತನಿಖಾ ಸಂಸ್ಥೆಗಳಿಂದ ದಾಳಿ ನಡೆಸುತ್ತಿವೆ.
ಇದರಿಂದ ಜನಸಾಮಾನ್ಯರು ಗೊಂದಲಕ್ಕಿಡಾಗುತ್ತಿದ್ದಾರೆ. ಆದ ಕಾರಣ ಈ ಸಮಾವೇಶದ ಮೂಲಕ ದೊಡ್ಡ ಮಟ್ಟದ ಸಂದೇಶ ನೀಡಲು ಕಾಂಗ್ರೆಸ್ ಪಕ್ಷ ಸಿದ್ದವಾಗಿದೆ.
ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್‌ಗಳ ಚುನಾವಣೆ ಬರುತ್ತಿರುವುದರಿಂದ ಜನರಿಗೆ ಸರ್ಕಾರದ ಗ್ಯಾರಂಟಿ ಯೋಜನೆಗಳು ತಲುಪಬೇಕು ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…
ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್…
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…