ರಾಜ್ಯ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌ : ಆರ್.ಅಶೋಕ ಆಕ್ರೋಶ

ಬೆಂಗಳೂರು : ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ. ಇದನ್ನು ವಿರೋಧಿಸಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರನ್ನು ಅತಂತ್ರವಾಗಿ ಐದು ಭಾಗ ಮಾಡಲಾಗಿದೆ. ರಾಜಕೀಯ ದೃಷ್ಟಿಯಿಂದ ಹಾಗೂ ಕಾಂಗ್ರೆಸ್‌ ಗೆಲ್ಲಬೇಕೆಂಬ ಗುರಿಯಿಂದ ವಿಭಜನೆ ಮಾಡಲಾಗಿದೆ. ಐದು ಪಾಲಿಕೆಗಳ ನಡುವೆ ತಾರತಮ್ಯ ಉಂಟಾಗಲಿದೆ. ಇದರ ವಿರುದ್ಧ ಕೋರ್ಟ್‌ ಮೊರೆ ಹೋಗಿ ಹೋರಾಟ ಮಾಡಲಾಗುವುದು. ಬೆಂಗಳೂರನ್ನು ಒಡೆಯಿರಿ ಎಂದು ಜನರು ಕೇಳಿಲ್ಲ. ಈಗಾಗಲೇ ನಗರದಲ್ಲಿ ತೆರಿಗೆ, ಸೆಸ್‌, ಇ ಖಾತಾದಿಂದ ಸಮಸ್ಯೆ ಉಂಟುಮಾಡಿದ್ದಾರೆ. ಇಂತಹ ಸಮಯದಲ್ಲಿ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲು ಖಚಿತವಾಗಿದೆ. ಅದನ್ನು ತಪ್ಪಿಸಲು ಹೀಗೆ ಭಾಗ ಮಾಡಿದ್ದಾರೆ ಎಂದರು.

ಕಪ್ಪು ಪಟ್ಟಿಯಲ್ಲಿರುವ ಗುತ್ತಿಗೆದಾರರಿಗೆ ಸುರಂಗ ರಸ್ತೆ ಯೋಜನೆಯನ್ನು ನೀಡಲಾಗುತ್ತಿದೆ. ಸುರಂಗ ರಸ್ತೆಗೆ ಟೋಲ್‌ ಕೂಡ ಇರುವುದರಿಂದ ಶ್ರೀಮಂತರು ಮಾತ್ರ ಇದನ್ನು ಬಳಸಬಹುದು. ಜನಸಾಮಾನ್ಯರಿಗೆ ಇದರಿಂದ ಪ್ರಯೋಜನವಿಲ್ಲ. ಅಭಿವೃದ್ಧಿಗೆ ನಮ್ಮ ಸಹಕಾರವಿದೆ. ಆದರೆ ದುಡ್ಡು ಕೊಳ್ಳೆ ಹೊಡೆಯುವ ಯೋಜನೆಗಳನ್ನು ವಿರೋಧಿಸುತ್ತೇವೆ. ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಭೂಕಂಪದ ನಾಡು ಮಾಡಬಾರದು ಎಂದರು.

ಹೆಬ್ಬಾಳ ಮೇಲ್ಸೇತುವೆ ಬಳಿಯ ಜಂಕ್ಷನ್‌ಗೆ ಎಲ್ಲ ಕಡೆಯಿಂದ ವಾಹನಗಳು ಬರುತ್ತವೆ. ಅಂತಹ ಜಾಗವನ್ನು ಖಾಸಗಿ ಭೂ ಮಾಲೀಕರಿಗೆ ನೀಡಲು ಸರ್ಕಾರ ಮುಂದಾಗಿದೆ. ಇದನ್ನು ವಿರೋಧಿಸಿ ಸದನದಲ್ಲಿ ಚರ್ಚಿಸಲಾಗುವುದು. ಇ ಖಾತಾ ವಿಚಾರದಲ್ಲಿ ಜನರಿಗೆ ತೊಂದರೆ ನೀಡಲಾಗುತ್ತಿದೆ. ಹಣ ಲೂಟಿ ಮಾಡಲು ಬೆಂಗಳೂರನ್ನು ಬಳಸಬಾರದು ಎಂದರು.

ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಹೋಳು ಮಾಡುತ್ತಿದೆ. ಎಲ್ಲೆಡೆ ಟ್ರಾಫಿಕ್‌ ಹಾಗೂ ಕಸದ ಸಮಸ್ಯೆ ಕಾಣುತ್ತಿದೆ. ಹೋಳು ಮಾಡುವುದರಿಂದ ಅಭಿವೃದ್ಧಿಯಾಗುವುದಿಲ್ಲ. ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಬೇಕು. ಅನುದಾನವಿಲ್ಲದೆ ಅಭಿವೃದ್ಧಿ ಶೂನ್ಯವಾಗಿದೆ. ಹೊಸ ಪಾಲಿಕೆಗಳ ರಚನೆಯಿಂದ ಬೆಂಗಳೂರು ಜನರ ಹೃದಯ ಚೂರಾಗಲಿದೆ. ಇದರ ವಿರುದ್ಧ ಹೋರಾಟ ಮಾಡಲು ಸಭೆ ನಡೆಸಲಾಗಿದೆ ಎಂದು ತಿಳಿಸಿದರು.

ನಾಲ್ವಡಿ ಕೊಡುಗೆ ಸ್ಮರಿಸಬೇಕು
ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಹಳೆ ಮೈಸೂರು ಭಾಗಕ್ಕೆ ನೀಡಿದ ಕೊಡುಗೆಯನ್ನು ನಾವು ಸ್ಮರಿಸಬೇಕು. ಕೆಆರ್‌ಎಸ್‌ ಜಲಾಶಯದಿಂದಾಗಿ ಜನರಿಗೆ ಜೀವಜಲ ದೊರೆತಿದೆ. ಅವರ ಸಾಧನೆಗಳಿಂದಾಗಿ ಜನರು ಅನ್ನ ತಿನ್ನುತ್ತಿದ್ದಾರೆ. ಸೋಪ್‌ ಫ್ಯಾಕ್ಟರಿ, ವಿಶ್ವವಿದ್ಯಾಲಯಗಳ ನಿರ್ಮಾಣ, ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದವರೇ ಅವರು. ಯತೀಂದ್ರ ಸಿದ್ದರಾಮಯ್ಯ ಮಹಾರಾಜರ ಕುಟುಂಬಕ್ಕೆ ಅಪಮಾನ ಮಾಡಿದ್ದಾರೆ. ಕೂಡಲೇ ಅವರು ಕ್ಷಮೆ ಕೇಳಬೇಕು ಎಂದರು.

ಹುಲಿಗಳು ಸಾಯುವುದನ್ನು ನೋಡಿದರೆ ಅರಣ್ಯ ಇಲಾಖೆ ಸತ್ತುಹೋಗಿದೆ ಎಂದೆನಿಸುತ್ತದೆ. ಈ ನಡುವೆ ಗೋವುಗಳನ್ನು ಅರಣ್ಯದಲ್ಲಿ ಮೇಯಿಸುವಂತಿಲ್ಲ ಎಂಬ ಆದೇಶ ನೀಡಲಾಗಿದೆ. ಇಂತಹ ಕ್ರಮ ಒಳ್ಳೆಯದಲ್ಲ ಎಂದರು.

136 ಸೀಟುಗಳನ್ನು ಗೆದ್ದಿರುವ ಬಗ್ಗೆ ನಮಗೂ ಅನುಮಾನವಿದೆ ಎಂದು ನಾವು ಹೇಳಬಹುದು. ಚುನಾವಣೆಯಲ್ಲಿ ಸೋತಾಗ ಸಾಕ್ಷಿ ಕೇಳುತ್ತಾರೆ. ಭಯೋತ್ಪಾದಕರ ಮೇಲೆ ದಾಳಿ ಮಾಡಿದಾಗಲೂ ಹೀಗೆ ಸಾಕ್ಷಿ ಕೇಳಿದ್ದರು ಎಂದರು.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

18 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

18 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

1 day ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

1 day ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

1 day ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

1 day ago