ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು ಬೇಡ ಅಂದೋರು? ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಟೀಕಾಪ್ರಹಾರ ನಡೆಸಿದರು.
ಸರ್ಕಾರದ ವಿರುದ್ಧ ಬಿಜೆಪಿಗರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ರೈತರ ಬಗ್ಗೆ ಬಿಜೆಪಿಯವರಿಗೆ ಕರುಣೆ ಬಂದ ಹಾಗೆ ಇದೆ. ರೈತರ ಪರವಾಗಿ ಬಿಜೆಪಿ ಅವರು ಏನು ಮಾಡಿದ್ದಾರೆ ಅಂತ ಒಂದು ಪಟ್ಟಿ ಬಿಡುಗಡೆ ಮಾಡಲಿ. ಅವರಿಗೆ ನಾಚಿಕೆ ಆಗಬೇಕು. ರೈತರ ಮೇಲೆ ಗೋಲಿಬಾರ್ ಮಾಡಿಸಿದವರು, ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಚಳಿ, ಮಳೆಯಲ್ಲಿ ನೂರಾರು ಜನ ರೈತರು ಸತ್ತರು. ರೈತರ ಮೇಲೆ ಗಾಡಿ ಹತ್ತಿಸಿದವರು ಯಾರು? ಈಗ ರೈತರ ಬಗ್ಗೆ ಮಾತನಾಡಲು ಬರುತ್ತಾರೆ, ಅವರಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಪಕ್ಷವಾಗಲಿ, ನಾನಾಗಲಿ, ಎಲ್ಲರೂ ರೈತರ ಪರ ಇದ್ದೇವೆ ಎಂದರು.
ಇದನ್ನೂ ಓದಿ: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ನಮ್ಮದು ಜಾತ್ಯತೀತ ಸರ್ಕಾರ
ನಮ್ಮದು ಜಾತ್ಯತೀತ ಸರ್ಕಾರ, ಬಸವಣ್ಣ, ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಬಾಬಾ ಸಾಹೇಬ ಅಂಬೇಡ್ಕರ್, ಮಹಾತ್ಮಾ ಗಾಂಧೀಜಿ ಸೇರಿದಂತೆ ಅನೇಕ ಮಹನೀಯರ ಜಯಂತಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಟಿಪ್ಪು ಜಯಂತಿಯನ್ನು ಯಾಕೆ ವಿವಾದ ಮಾಡಲಾಗುತ್ತಿದೆ ಎಂದು ತಿಳಿಯುತ್ತಿಲ್ಲ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕೆನ್ನುವುದು ನಮ್ಮ ನಿಲುವು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…
ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…
ಬೇಸಿಗೆ ಶುರುವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು ೩೪ ಸೆಲ್ಸಿಯಸ್‌ಗೂ ಹೆಚ್ಚು ಪ್ರಮಾಣದಲ್ಲಿ ಬಿಸಿಲಿನ ತಾಪ ಮಾನ ಏರಿಕೆಯಾಗಿರುವ…
ಮಂಜು ಕೋಟೆ ಕೋಟೆ: ರಾಜೇಂದ್ರ, ಸಿ.ವಿ.ನಾಗರಾಜು, ಯೋಗಾನರಸಿಂಹೇಗೌಡ, ಗುಂಡತ್ತೂರು ಪ್ರಕಾಶ್ ಪ್ರಬಲ ಆಕಾಂಕ್ಷಿಗಳು ಎಚ್.ಡಿ.ಕೋಟೆ: ಜಾ.ದಳ ತಾಲ್ಲೂಕು ಅಧ್ಯಕ್ಷರನ್ನು ನೇಮಕ…
ಪುರಸಭೆಯಿಂದ ಹಲವು ಕಡೆಗಳಲ್ಲಿ ಸಿಸಿಟಿವಿ ಅಳವಡಿಕೆ; ಸ್ವಚ್ಛ ಪಟ್ಟಣಕ್ಕೆ ಸಹಕರಿಸಲು ಮನವಿ ಗುಂಡ್ಲುಪೇಟೆ: ಪಟ್ಟಣದ ಕೆಲವೆಡೆ ಕಸ ಸುರಿಯದಂತೆ ಎಚ್ಚರಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಭಾರತದ ಮೇಲೆ ದಿನದಿಂದ ದಿನಕ್ಕೆ ಅನಿಲ ಬಿಕ್ಕಟ್ಟು ಬಿಗಡಾಯಿಸುತ್ತಿದ್ದು, ವಾಣಿಜ್ಯ ಬಳಕೆಯ…