Mysore
28
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಕಾಂಗ್ರೆಸ್‌ನಲ್ಲಿ ಬಂಡಾಯದ ಬಿಸಿ: ಐವರನ್ನು ಉಚ್ಛಾಟನೆಗೊಳಿಸಿ ಆದೇಶ ಹೊರಡಿಸಿದ ಕಾಂಗ್ರೆಸ್‌

ಬೆಂಗಳೂರು: ಲೋಕಸಭಾ ಚುನಾವಣೆ ಕಾವೇರುತ್ತಿರುವ ಬೆನ್ನಲ್ಲೇ, ಕರ್ನಾಟಕದಲ್ಲಿ ಎಂಎಲ್‌ಸಿ ಚುನಾವಣೆ ರಂಗೇರಿದೆ. ಇದೇ ಜೂನ್‌.3 ರಂದು 6 ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್‌ ಹಾಗೂ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳು ತಂತ್ರಗಾರಿಕೆ ಎಣೆಯುತ್ತಿವೆ.

ರಾಜ್ಯ ವಿಧಾನ ಪರಿಷತ್‌ಗೆ ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿದಂತೆ 6 ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ. ಅದರಲ್ಲಿ ಕಾಂಗ್ರೆಸ್‌ ಪಕ್ಷ ಎಲ್ಲಾ 6 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ನೇಮಿಸಿದೆ. ಆದರೆ ಇದನ್ನು ಖಂಡಿಸಿ ಬಂಡಾಯವೆದ್ದಿರುವ ಕೆಲವು ಆಕಾಂಕ್ಷಿಗಳು ಸ್ವತಂತ್ರವಾಗಿ ಚುನಾವಣಾ ಕಣಕ್ಕೆ ಇಳಿದಿದ್ದಾರೆ.

ಸರ್ಕಾರದ ಆಜ್ಞೆ ಮೀರಿ ಬಂಡಾಯ ಎದ್ದಿರುವ ಅಭ್ಯರ್ಥಿಗಳಿಗೆ ಕಾಂಗ್ರೆಸ್‌ ಬಿಗ್‌ ಶಾಕ್‌ ನೀಡಿದೆ. ಬಂಡಾಯ ಅಭ್ಯರ್ಥಿಗಳಿಗೆ ಉಚ್ಛಾಟನೆಯ ಬಿಸಿ ತೋರಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ನೀಡಿದ ಸೂಚನೆ ಮೇರೆಗೆ ಐವರು ಅಭ್ಯರ್ಥಿಗಳು ಉಚ್ಛಾಟಿಸಿ ಕೆಪಿಸಿಸಿ ಕಾರ್ಯದರ್ಶಿ ಕೆ.ಸಿ ಚಂದ್ರಶೇಖರ್‌ ಆದೇಶ ಹೊರಡಿಸಿದ್ದಾರೆ.

ಉಚ್ಛಾಟನೆಗೊಂಡ ಬಂಡಾಯ ಅಭ್ಯರ್ಥಿಗಳು

ನೈಋತ್ಯ ಪದವೀಧರ ಕ್ಷೇತ್ರದಿಂದ ಎಸ್‌.ಪಿ ದಿನೇಶ್‌, ಬೆಂಗಳೂರು ಪದವೀಧರ ಕ್ಷೇತ್ರದಿಂದ ಫರ್ಡಿನಾಂಡ್‌ ಲಾರನ್ಸ್‌, ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಬಿ.ಆರ್‌ ನಂಜೇಶ್‌, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಲೋಕೇಶ್‌ ತಾಳಿಕಟ್ಟೆ ಮತ್ತು ವಿನೋದ್‌ ರಾಜ್‌ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಆದೇಶ ಹೊರಡಿಸಿದೆ.

Tags:
error: Content is protected !!