ಬೆಂಗಳೂರು: ಲೋಕಸಭಾ ಚುನಾವಣೆ ಕಾವೇರುತ್ತಿರುವ ಬೆನ್ನಲ್ಲೇ, ಕರ್ನಾಟಕದಲ್ಲಿ ಎಂಎಲ್‌ಸಿ ಚುನಾವಣೆ ರಂಗೇರಿದೆ. ಇದೇ ಜೂನ್.3 ರಂದು 6 ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ತಂತ್ರಗಾರಿಕೆ ಎಣೆಯುತ್ತಿವೆ.
ರಾಜ್ಯ ವಿಧಾನ ಪರಿಷತ್‌ಗೆ ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿದಂತೆ 6 ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ. ಅದರಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಾ 6 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ನೇಮಿಸಿದೆ. ಆದರೆ ಇದನ್ನು ಖಂಡಿಸಿ ಬಂಡಾಯವೆದ್ದಿರುವ ಕೆಲವು ಆಕಾಂಕ್ಷಿಗಳು ಸ್ವತಂತ್ರವಾಗಿ ಚುನಾವಣಾ ಕಣಕ್ಕೆ ಇಳಿದಿದ್ದಾರೆ.
ಸರ್ಕಾರದ ಆಜ್ಞೆ ಮೀರಿ ಬಂಡಾಯ ಎದ್ದಿರುವ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಬಿಗ್ ಶಾಕ್ ನೀಡಿದೆ. ಬಂಡಾಯ ಅಭ್ಯರ್ಥಿಗಳಿಗೆ ಉಚ್ಛಾಟನೆಯ ಬಿಸಿ ತೋರಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೀಡಿದ ಸೂಚನೆ ಮೇರೆಗೆ ಐವರು ಅಭ್ಯರ್ಥಿಗಳು ಉಚ್ಛಾಟಿಸಿ ಕೆಪಿಸಿಸಿ ಕಾರ್ಯದರ್ಶಿ ಕೆ.ಸಿ ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ.
ಉಚ್ಛಾಟನೆಗೊಂಡ ಬಂಡಾಯ ಅಭ್ಯರ್ಥಿಗಳು
ನೈಋತ್ಯ ಪದವೀಧರ ಕ್ಷೇತ್ರದಿಂದ ಎಸ್.ಪಿ ದಿನೇಶ್, ಬೆಂಗಳೂರು ಪದವೀಧರ ಕ್ಷೇತ್ರದಿಂದ ಫರ್ಡಿನಾಂಡ್ ಲಾರನ್ಸ್, ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಬಿ.ಆರ್ ನಂಜೇಶ್, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಲೋಕೇಶ್ ತಾಳಿಕಟ್ಟೆ ಮತ್ತು ವಿನೋದ್ ರಾಜ್ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಆದೇಶ ಹೊರಡಿಸಿದೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…