ರಾಜ್ಯ

ಗೂಂಡಾಗಳ ಕೈಗೆ ರಾಜ್ಯ ನೀಡಿದ ಕಾಂಗ್ರೆಸ್: ಆರ್‌.ಅಶೋಕ

ದಕ್ಷಿಣ ಕನ್ನಡ: ಕರ್ನಾಟಕದಲ್ಲಿ ಭಾರತ್‌ ಮಾತಾ ಕೀ ಜೈ, ಜೈ ಶ್ರೀರಾಮ್‌ ಎಂದರೆ ತಪ್ಪು. ಕಾಂಗ್ರೆಸ್‌ ಸರ್ಕಾರ ಗೂಂಡಾಗಳ ಕೈಗೆ ರಾಜ್ಯವನ್ನು ಕೊಟ್ಟಿದ್ದು, ಇಂತಹ ಘೋಷಣೆ ಕೂಗಿದರೆ ಚೂರಿ ಹಾಕುತ್ತಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ವಾಗ್ದಾಳಿ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಬೊಳಿಯಾರಿನಲ್ಲಿ ಭಾರತ ಮಾತೆಗೆ ಜೈಕಾರ ಕೂಗಿದ್ದಕ್ಕಾಗಿ ಮತಾಂಧರಿಂದ ಹಲ್ಲೆಗೊಳಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿಯ ಗಾಯಾಳು ಕಾರ್ಯಕರ್ತರನ್ನು ಆರ್‌.ಅಶೋಕ ಭೇಟಿ ಮಾಡಿ ಧೈರ್ಯ ಹೇಳಿದರು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಘಟನೆಗಳು ನಡೆಯದಂತೆ ಬಿಜೆಪಿ ಎಚ್ಚರ ವಹಿಸಲಿದೆ. ಕಾರ್ಯಕರ್ತರ ಜೊತೆಗೆ ನಾವೆಲ್ಲರೂ ಸದಾ ನಿಲ್ಲುತ್ತೇವೆ. ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಮರ್ಪಕವಾಗಿ ಮಾಡಬೇಕು. ಹಾಗೆಯೇ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದರ.

ಭಾರತ್‌ ಮಾತಾ ಕೀ ಜೈ ಎಂಬ ಘೋಷಣೆ ಕೂಗಿದ್ದಕ್ಕೆ ಬಿಜೆಪಿ ಕಾರ್ಯಕರ್ತರಾದ ಹರೀಶ್‌ ಮತ್ತು ನಂದಕುಮಾರ್‌ ಅವರಿಗೆ ಚೂರಿ ಇರಿಯಲಾಗಿದೆ. ಈ ತಾಲಿಬಾನ್‌ ಸರ್ಕಾರದಿಂದ ಪಾಕಿಸ್ತಾನಕ್ಕೆ ಜೈಕಾರದ ಘೋಷಣೆ ಕೇಳಿಬರುತ್ತಿದೆ. ಈ ಘಟನೆಯನ್ನು ಸದನದಲ್ಲೂ ಪ್ರಶ್ನಿಸಿ ಹೋರಾಟ ಮಾಡುತ್ತೇವೆ. ಸ್ಪೀಕರ್‌ ಮತ್ತು ಆರೋಗ್ಯ ಸಚಿವರು ಆಸ್ಪತ್ರೆ ಕಾರ್ಯಕ್ರಮಕ್ಕೆ ಬಂದಿದ್ದರೂ, ಗಾಯಾಳುಗಳನ್ನು ನೋಡಿ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ ಎಂದು ಆರೋಪಿಸಿದರು.

ಈ ಘಟನೆ ನಡೆದ ನಂತರ ಪಾಕಿಸ್ತಾನದ ಕುರಿತು ಹೇಳಿದ್ದಾರೆಂದು ಆರೋಪಿಸಿ ಅಮಾಯಕ ಹಿಂದೂ ಕಾರ್ಯಕರ್ತರ ವಿರುದ್ಧ ಮತ್ತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹಾಗೆ ಇದ್ದಲ್ಲಿ ಅದರ ಕುರಿತಾದ ವೀಡಿಯೋ ಅಥವಾ ಪುರಾವೆ ಬಿಡುಗಡೆ ಮಾಡಲಿ. ಭಾರತ್‌ ಮಾತಾ ಜೈ ಎನ್ನುವುದು ಬಿಟ್ಟರೆ ಬೇರಾವುದೇ ಘೋಷಣೆ ಕೂಗಿಲ್ಲ. ಇನ್ನೊಂದು ಪ್ರಕರಣ ದಾಖಲಿಸಿ ಮುಖ್ಯವಾದ ಪ್ರಕರಣವನ್ನು ಮುಚ್ಚಿಹಾಕುವ ಕೆಲಸವನ್ನು ಜಿಲ್ಲಾಡಳಿತ ಮಾಡುತ್ತಿದೆ. ಹಿಂದೂ ಕಾರ್ಯಕರ್ತರ ಮೇಲೆ ದಾಖಲಿಸಿದ ಪ್ರಕರಣವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 20 ಪರ್ಸೆಂಟ್‌ ಹಣ ನುಂಗಿದ ಸಚಿವರ ರಾಜೀನಾಮೆ ಪಡೆಯಲಾಗಿದೆ. ಆದರೆ 80 ಪರ್ಸೆಂಟ್‌ ಹಣ ನುಂಗಿದ ಸಿಎಂ ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡಬೇಕು. ಇದಕ್ಕಾಗಿ ಸದನದಲ್ಲಿ ಆಗ್ರಹ ಮಾಡುತ್ತೇವೆ. ತೆಲಂಗಾಣದಲ್ಲೂ ಕಾಂಗ್ರೆಸ್‌ ಸರ್ಕಾರವಿದ್ದು, ಅಲ್ಲಿಗೂ ನಿಗಮದ ಹಣ ಸಂದಾಯವಾಗಿದೆ. ಆದ್ದರಿಂದ ಇದು ದೊಡ್ಡ ಭ್ರಷ್ಟಾಚಾರದ ಪ್ರಕರಣ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

7 mins ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

31 mins ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

1 hour ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

1 hour ago

ಉಡುಪಿಯಲ್ಲಿ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್:‌ ಶ್ರೀಕೃಷ್ಣ ಮಠದ ಗೀತೋತ್ಸವದಲ್ಲಿ ಭಾಗಿ

ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್‌ ಕಲ್ಯಾಣ್‌ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…

2 hours ago

ಮಲೆನಾಡಿನಲ್ಲಿ ಮುಂದುವರಿದ ಕಾಫಿ ಕಳವು ಪ್ರಕರಣ

ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…

2 hours ago