ಬೆಂಗಳೂರು : ಕಾಂಗ್ರೆಸ್ ಸರ್ಕಾರ ಸ್ಥಿರವಾಗಿದೆ ಮತ್ತು ಪತನಗೊಳ್ಳಲು ಸಾಧ್ಯವಿಲ್ಲ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿಯವರ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ.
ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಪತನವಾದ ರೀತಿಯಲ್ಲಿಯೇ ಕರ್ನಾಟಕದಲ್ಲಿಯೂ ಕಾಂಗ್ರೆಸ್ ನೇತೃತ್ವದ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೋಮವಾರ ಹೇಳಿದ್ದರು.
ಆಪರೇಷನ್ ಕಮಲದ ಬಗ್ಗೆ ಬಿಜೆಪಿ ಎಂದಿಗೂ ಮಾತನಾಡಿಲ್ಲ. ಆದರೆ, ಅದರ ಬದಲಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಾಟಕ ಕಂಪನಿಯವರೇ ಮಾತನಾಡುತ್ತಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಸರ್ಕಾರ ಬಿದ್ದರೆ, ಅದಕ್ಕೆ ಡಿಕೆ ಶಿವಕುಮಾರ್ ಕಾರಣ. ಆಪರೇಷನ್ ಕಮಲ ಮತ್ತು ಶಾಸಕರಿಗೆ 50 ಕೋಟಿ ಆಮಿಷ ನೀಡುತ್ತಿರುವ ಬಗ್ಗೆ ಮಾತನಾಡುತ್ತಿರುವುದು ಡಿಕೆ ಶಿವಕುಮಾರ್ ಅವರ ನಾಟಕ ಕಂಪನಿಯವರು. ಆಪರೇಷನ್ ಕಮಲ ಎಂಬ ಪದವನ್ನು ಕಾಂಗ್ರೆಸ್ ಸೃಷ್ಟಿಸಿದೆ. ನೆರೆಯ ರಾಜ್ಯದಲ್ಲಿ ಅಜಿತ್ ಪವಾರ್ ಬಣ ಸಿಡಿದಂತೆಯೇ ರಾಜ್ಯದಲ್ಲೂ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಜಾರಕಿಹೊಳಿ ಆರೋಪಿಸಿದ್ದರು.
ಅವರಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ನಮ್ಮ ಸರ್ಕಾರ ಸ್ಥಿರವಾಗಿದೆ ಮತ್ತು ಬಿಜೆಪಿ ನಾಯಕರೊಬ್ಬರ ಹೇಳಿಕೆಯಿಂದ ಅದು ಪತನವಾಗಲು ಸಾಧ್ಯವಿಲ್ಲ ಎಂದು ಜಾರಕಿಹೊಳಿ ವಿರುದ್ಧ ಕಿಡಿಕಾರಿದ್ದಾರೆ.
ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದು ನಾಲ್ಕು ವರ್ಷಗಳ ಹಿಂದೆ ಸಮ್ಮಿಶ್ರ ಸರ್ಕಾರದ ಪತನಕ್ಕೆ ಪ್ರಮುಖ ಪಾತ್ರ ವಹಿಸಿದ್ದ ಜಾರಕಿಹೊಳಿ, ಆಪರೇಷನ್ ಕಮಲದ ಬಗ್ಗೆ ಬಿಜೆಪಿ ಎಂದಿಗೂ ಮಾತನಾಡಿಲ್ಲ. ಬಿಜೆಪಿ ಆಪರೇಷನ್ ಕಮಲ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ನಾಯಕರ ಆರೋಪವನ್ನು ನಿರಾಕರಿಸಿದ್ದರು.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…