ರಾಜ್ಯ

ಕಡೆಗೂ ರಾಮಭಕ್ತಿಗೆ ಶರಣಾದ ಕಾಂಗ್ರೆಸ್ ಸರ್ಕಾರ: ಆರ್‌ ಅಶೋಕ್‌

ಬೆಂಗಳೂರು:  ಇದೇ ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಪ್ರಯುಕ್ತ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಜನವರಿ 22 ರಂದು ವಿಶೇಷ ಪೂಜೆ, ಪ್ರಾರ್ಥನೆ ಮತ್ತು ಮಂಗಳಾರತಿ ನಡೆಸುವಂತೆ ಸೂಚಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಈ ಸುತ್ತೋಲೆಯನ್ನು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಟೋದೊಂದಿಗೆ ಮಾಹಿತಿ ಹಂಚಿಕೊಂಡಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಕಡೆಗೂ ರಾಮಭಕ್ತಿಗೆ ಶರಣಾದ ಕಾಂಗ್ರೆಸ್ ಸರ್ಕಾರ, ಜನವರಿ 22ರಂದು ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಆಯೋಜಿಸಲು ರಾಜ್ಯ ಸರ್ಕಾರ ಆದೇಶಿಸಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಇದು ರಾಮಭಕ್ತರ, ಹಿಂದೂ ಕಾರ್ಯಕರ್ತರ ಹೋರಾಟಕ್ಕೆ ಸಿಕ್ಕ ಜಯ. ತುಷ್ಟೀಕರಣದ ವಿರುದ್ಧ ಹಿಂದುತ್ವದ ದಿಗ್ವಿಜಯ ಎಂದು ಆರ್‌. ಅಶೋಕ್‌ ಹೇಳಿದ್ದಾರೆ.

https://x.com/RAshokaBJP/status/1743946154960990631?s=20

andolanait

Recent Posts

ಇರಾನ್‌ ಮೇಲೆ ಅಮೇರಿಕಾ ಭೀಕರ ದಾಳಿ: ಟಾಪ್‌ ಕಮಾಂಡರ್‌ಗಳ ಹತ್ಯೆ

ಟೆಹರಾನ್:‌ ಟೆಹರಾನ್‌ ಮೇಲೆ ಅಮೇರಿಕಾ ನಡೆಸಿದ ಬೃಹತ್‌ ದಾಳಿಯಲ್ಲಿ ಇರಾನಿನ ಮಿಲಿಟರಿ ಪಡೆಯ ಉನ್ನತ ಕಮಾಂಡರ್‌ಗಳನ್ನು ಹತ್ಯೆ ಮಾಡಲಾಗಿದೆ. ಈ…

6 mins ago

ಮಡಿಕೇರಿ: ಶರಣ್ಯಾಳಿಗಾಗಿ ಇಂದು ಕೂಡ ತೀವ್ರಗೊಂಡ ಶೋಧ ಕಾರ್ಯಾಚರಣೆ

ಮಡಿಕೇರಿ: ತಡಿಯಂಡಮೋಳ್‌ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ನಾಪತ್ತೆಯಾಗಿ ಮೂರು ದಿನಗಳು ಕಳೆದರೂ ಈವರೆಗೂ…

19 mins ago

ಓದುಗರ ಪತ್ರ: ರೈಲು ಟಿಕೆಟ್ ರದ್ದತಿ ಹೊಸ ನಿಯಮದ ಬಗ್ಗೆ ಅರಿವಿರಲಿ

ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ…

1 hour ago

ಓದುಗರ ಪತ್ರ: ಅಂಚೆ ಕಚೇರಿಯಲ್ಲಿ ಹೆಚ್ಚುವರಿ ಕೌಂಟರ್ ತೆರೆಯಿರಿ

ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…

1 hour ago

ಓದುಗರ ಪತ್ರ: ಇರುವುದರಲ್ಲೇ ತೃಪ್ತಿ ಕಾಣಬೇಕು

ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…

1 hour ago

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

4 hours ago