ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಲು ಮುಂದಾಗಿರುವುದು ಒಂದು ಕಪಟ ನಾಟಕ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಪಕ್ಷದ ಹೋರಾಟದಿಂದ ಬೆದರಿರುವ ಕಾಂಗ್ರೆಸ್ ಇದೇ. 17ರಂದು ಕೇಂದ್ರದ ವಿರುದ್ಧ ಹೋರಾಟ ಮಾಡಲು ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ನೀವು ಎಷ್ಟೇ ಹೋರಾಟ ಮಾಡಿದರೂ ಜನ ನಂಬುವುದಿಲ್ಲ. ನಿಮ್ಮ ಹೋರಾಟದ ಪ್ರಯತ್ನ ಸಫಲವಾಗುವುದಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ದ ಬಿಜೆಪಿ ನಡೆಸಿದ ಹೋರಾಟದಲ್ಲಿ ಮೊದಲ ಹಂತದ ಜನಾಕ್ರೋಶ ಯಾತ್ರೆ ಯಶಸ್ವಿಯಾಗಿದೆ ಏಪ್ರಿಲ್.2, 3ರಂದು ಸರ್ಕಾರದ ಬೆಲೆ ಏರಿಕೆ ವಿರುದ್ಧ ಯಶಸ್ವಿ ಅಹೋರಾತ್ರಿ ಧರಣಿ ನಡೆಸಿದ್ದೆವು. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಪಕ್ಷದ ಎಲ್ಲ ನಾಯಕರೂ ಯಾತ್ರೆಯಲ್ಲಿ ಭಾಗವಹಿಸಿದ್ದರು ಎಂದು ಸಮರ್ಥನೆ ಮಾಡಿಕೊಂಡರು.
ರಾಜ್ಯಾದ್ಯಂತ ಬೆಲೆಯೇರಿಕೆ ವಿರುದ್ಧ ಹೋರಾಟ ಮಾಡಿದ್ದೇವೆ. ಮೂರು ಹಂತಗಳಲ್ಲಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದೇವೆ. ಮೊದಲ ಹಂತದ ಜನಾಕ್ರೋಶ ಯಾತ್ರೆ ಐದು ದಿನಗಳ ಕಾಲ ಒಂಭತ್ತು ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿದೆ. ಜನಾಕ್ರೋಶ ಯಾತ್ರೆಗೆ ನಮ್ಮೆಲ್ಲ ನಾಯಕರೂ ಬಂದಿದ್ದರು. ಆಯಾಯಾ ಭಾಗದ ನಾಯಕರು ಸಹಕರಿಸಿದ್ದಾರೆ. ಜನಾಕ್ರೋಶ ಯಾತ್ರೆಯಲ್ಲಿ 115 ಕಿ.ಮೀ ಪ್ರವಾಸ ಮಾಡಿದ್ದೇವೆ ಎಂದು ಮಾಹಿತಿ ನೀಡಿದರ.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯ ಸರ್ಕಾರ ಹಣಕಾಸು ಪರಿಸ್ಥಿತಿ ನಿರ್ವಹಣೆಯಲ್ಲಿ ವಿಫಲವಾಗಿದೆ. ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಫಲರಾಗಿದ್ದಾರೆ. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ರಾಜ್ಯದ ಜನರಿಗೆ ಈ ಸರ್ಕಾರ ಅಭಿವೃದ್ಧಿ ನೀಡುತ್ತಿಲ್ಲ. ಬೆಲೆ ಏರಿಕೆ ಕೊಡುಗೆ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು
ಚಾಮರಾಜನಗರ : ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ.…
ವಾಷಿಂಗ್ಟನ್ : ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರರಾದ ಟ್ಯಾಮಿ ಬ್ರೂಸ್ ಅವರು, ಪಹಲ್ಗಾಮ್ ದಾಳಿಯ ನಂತರ ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆಯ…
ಮಂಡ್ಯ : ಗಂಗಾರತಿ ರೀತಿ ದಕ್ಷಿಣ ಕರ್ನಾಟಕದ ಜೀವನಾಡಿ ಕಾವೇರಿ ಆರತಿ ಮಾಡುವ ಸಂಬಂಧ ಯೋಜನೆ ರೂಪಿಸಲು ಸಮಿತಿ ರಚಿಸಲಾಗಿದೆ…
ಕಲಬುರಗಿ : ನಗರದ ಜಗತ್ ವೃತ್ತದಲ್ಲಿ ಪಾಕಿಸ್ತಾನ ಧ್ವಜವನ್ನು ಅಂಟಿಸಿದ ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಜರಂಗದಳದ ಕಾರ್ಯಕರ್ತರು…
ಹೊಸದಿಲ್ಲಿ : ಪಹಲ್ಗಾಮ್‍ನ ಘಟನೆಯ ನಂತರ ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ ಆವರಿಸಿದ್ದು, ಯಾವುದೇ ಸಂದರ್ಭದಲ್ಲೂ ದಾಳಿ…
ಮೈಸೂರು : ಪರಿಶಿಷ್ಟ ಜಾತಿಯ ಕುಟುಂಬಗಳ ಸಮೀಕ್ಷೆಯನ್ನು ಮನೆ ಮನೆ ಸಮೀಕ್ಷೆ, ವಿಶೇಷ ಶಿಬಿರ ಹಾಗೂ ಅನ್ಲೈನ್ ನಲ್ಲಿ ಸ್ವಯಂ…