ರಾಜ್ಯ

ಕಾಂಗ್ರೆಸ್ ಸರ್ಕಾರವು ಭಾಷೆಯ ಹೆಸರಿನಲ್ಲಿ ದ್ವೇಷ ಹರಡುತ್ತಿದೆ: ಬಿಜೆಪಿ ಆರೋಪ

ಬೆಂಗಳೂರು : ಕನ್ನಡದ ಅಭಿಮಾನವನ್ನು ಸಾರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಚಾರಕ್ಕೆ ಬಿಜೆಪಿ ತೀವ್ರ ತಿರುಗೇಟು ನೀಡಿದ್ದು, ಕಾಂಗ್ರೆಸ್ ಸರ್ಕಾರವು ಭಾಷೆಯ ಹೆಸರಿನಲ್ಲಿ ದ್ವೇಷ ಹರಡುತ್ತಿದೆ ಎಂದು ಆರೋಪಿಸಿದೆ.

ತನ್ನ ಅಕೃತ ಸಾಮಾಜಿಕ ಜಾಲತಾಣದ ಎಕ್ಸ್‍ನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಕಳೆದ ಆರು ತಿಂಗಳಲ್ಲಿ ಚಿಕ್ಕಮಗಳೂರಿನಲ್ಲಿಯೇ 21 ಕನ್ನಡ ಶಾಲೆಗಳನ್ನು ಮುಚ್ಚಲಾಗಿದೆ. ರಾಜ್ಯ ಸರ್ಕಾರವು ಶಾಲೆಗಳಿಗೆ ಪಠ್ಯಪುಸ್ತಕಗಳನ್ನು ಸರಬರಾಜು ಮಾಡಿಲ್ಲ. ರಾಜ್ಯದಲ್ಲಿ ಭುವನೇಶ್ವರಿ ದೇವಿಯ ಪ್ರತಿಮೆಯನ್ನು ಸ್ಥಾಪಿಸಲು ಹಣವನ್ನು ಬಿಡುಗಡೆ ಮಾಡಲು ವಿಫಲವಾಗಿದೆ ಎಂದಿದೆ.

ರಾಜ್ಯದಲ್ಲಿ ಹಾವು, ಚೇಳು ಕಡಿತದಿಂದ ರೈತರು ಮತ್ತು ಅವರ ಮಕ್ಕಳು ಸಾಯುತ್ತಿದ್ದಾರೆ. ವಿದ್ಯುತ್ ಪೂರೈಕೆ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಆಗಾಗ ಪವರ್ಕಟ್ ಆಗುತ್ತಿದ್ದು, ಮಧ್ಯರಾತ್ರಿಯಲ್ಲಿ ಅದರ ಪೂರೈಕೆಯನ್ನು ಪುನಃ ಸ್ಥಾಪಿಸಲಾಗುತ್ತದೆ. ರೈತರಿಗೆ ಹಗಲಿನಲ್ಲಿ ವಿದ್ಯುತ್ ಪೂರೈಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದೆ.

ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಿಸಲು ಕೂಡ ರಾಜ್ಯ ಸರ್ಕಾರ ಕನ್ನಡ ಧ್ವಜಾರೋಹಣಕ್ಕೆ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರರು ಹೈಕೋರ್ಟ್‍ನಲ್ಲಿ ಅನುಮತಿ ಪಡೆಯಬೇಕಾಯಿತು ಎಂದು ತಿಳಿಸಿದೆ.

ಕನ್ನಡ ಧ್ವಜಾರೋಹಣಕ್ಕೆ ಅನುಮತಿ ನಿರಾಕರಿಸಿರುವುದು ಸಿದ್ದರಾಮಯ್ಯನವರ ಕನ್ನಡ ಪ್ರೇಮ ಮತ್ತು ಅಭಿಮಾನದ ಹಿಂದಿನ ವಾಸ್ತವವನ್ನು ಬಯಲು ಮಾಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ 60 ವರ್ಷಗಳ ಕಾಲ ರಾಜ್ಯವನ್ನು ಆಳಿದರೂ, ಕನ್ನಡ ಮತ್ತು ಅದರ ಹೆಮ್ಮೆಯನ್ನು ರಕ್ಷಿಸುವಲ್ಲಿ ಯಾವಾಗಲೂ ವಿಫಲವಾಗಿದೆ ಎಂದು ಟೀಕಿಸಿದೆ.

ಕನ್ನಡಾಭಿಮಾನದ ಜ್ಯೋತಿಯಂತೆ ನಡೆದುಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವ ಬದಲು ತಮಿಳುನಾಡಿನಲ್ಲಿ ಐಎನ್‍ಡಿಐಎ ಮೈತ್ರಿಕೂಟದ ಪಾಲುದಾರ ಡಿಎಂಕೆ ಸರ್ಕಾರವನ್ನು ಸಮಾಧಾನಪಡಿಸಲು ಕಾವೇರಿ ನದಿ ಪಾತ್ರದ ಎಲ್ಲ ಜಲಾಶಯಗಳಿಂದ ಸದ್ದಿಲ್ಲದೆ ನೀರು ಬಿಡುಗಡೆ ಮಾಡಿದ್ದಾರೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿನ ಜನರ ಸಮಸ್ಯೆಗಳನ್ನು ಬಗೆಹರಿಸುವ ಬದಲು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಗಳನ್ನು ಹರಡಲು ಅರೆಬೆಂದ ದತ್ತಾಂಶಗಳಿಂದ ತುಂಬಿದ ಕಥೆಗಳನ್ನು ಹೆಣೆಯುವ ಮತ್ತು ಹಸಿ ಸುಳ್ಳನ್ನು ಹೇಳುವ ಕೆಟ್ಟ ಅಭ್ಯಾಸವನ್ನು ಮುಖ್ಯಮಂತ್ರಿ ಹೊಂದಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago