ರಾಜ್ಯ

ಹಗರಣಗಳಿಂದಾಗಿ ಕೋಮಾಗೆ ಹೋದ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದು, ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಮಂಗಳವಾರ(ಆ.3) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಉಂಟಾಗಿದ್ದು, ಅದಕ್ಕೆ ಪ್ರತ್ಯೇಕ ಪರಿಹಾರ ನೀಡಲು ಸರ್ಕಾರ ಮುಂದಾಗಿಲ್ಲ. ಮಳೆಯಿಂದಾಗಿ ಎಲ್ಲ ಕಡೆ ರಸ್ತೆಗಳು ಹದಗೆಟ್ಟಿವೆ. ರಸ್ತೆಗಳಲ್ಲಿ ಸುಲಲಿತವಾಗಿ ಓಡಾಡುವ ಗ್ಯಾರಂಟಿಯನ್ನು ಸರ್ಕಾರ ನೀಡಬೇಕು. ಹಗರಣಗಳಿಂದಾಗಿ ಸರ್ಕಾರ ಕೋಮಾ ಸ್ಥಿತಿಗೆ ಹೋಗಿದ್ದು, ಎಲ್ಲರೂ ಮುಖ್ಯಮಂತ್ರಿ ಕುರ್ಚಿಗೆ ಟವೆಲ್‌ ಹಾಕಿದ್ದಾರೆ ಎಂದರು.

ಬೆಂಗಳೂರಿನಲ್ಲಿ ಕಮಿಶನ್‌ ಆಸೆಗಾಗಿ ಗುತ್ತಿಗೆದಾರರಿಗೆ ಕೊಡಬೇಕಿರುವ 1,500 ಕೋಟಿ ರೂ. ತಡೆಹಿಡಿದಿದ್ದು, ಗುತ್ತಿಗೆದಾರರು ಪ್ರತಿಭಟನೆ ಮಾಡುತ್ತಿದ್ದಾರೆ. ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಎಲ್ಲೆಡೆ ಕಸದ ರಾಶಿ ಬಿದ್ದಿದೆ. ಇದು ಕಾಸಿಲ್ಲದ ಬ್ರ್ಯಾಂಡ್‌ ಬೆಂಗಳೂರಾಗಿದೆ ಎಂದು ದೂರಿದರು.

ಕೆಪಿಎಸ್‌ಸಿಯಲ್ಲಿ ಕನ್ನಡ ಭಾಷಾಂತರ ಮಾಡಲು ಕೂಡ ಯೋಗ್ಯತೆ ಇಲ್ಲ. ಸಿದ್ದರಾಮಯ್ಯನವರು ಕನ್ನಡ ಕಾವಲು ಸಮಿತಿಯ ಅಧ್ಯಕ್ಷರಾಗಿದ್ದರು. ಅಂತಹವರ ಆಡಳಿತದಲ್ಲೇ ಕನ್ನಡ ಪ್ರಶ್ನೆಪತ್ರಿಕೆಯನ್ನು ನೀಡಲು ಸಾಧ್ಯವಾಗಿಲ್ಲ. ಮುಡಾ, ವಾಲ್ಮೀಕಿ ನಿಗಮದ ಹಗರಣದ ಒತ್ತಡದಿಂದಾಗಿ ಕೆಪಿಎಸ್‌ಸಿಯಲ್ಲಿ ಪರೀಕ್ಷೆ ನಡೆಸಲು ಕೂಡ ಸಾಧ್ಯವಾಗಿಲ್ಲ. ಪರೀಕ್ಷೆ ರದ್ದು ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಆದರೆ ಕಳೆದ ಬಾರಿ ಪರೀಕ್ಷೆ ಬರೆದವರಿಗೆ ಈ ಬಾರಿ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರ ಈ ಜವಾಬ್ದಾರಿಯಿಂದ ನುಣುಚಿಕೊಳ್ಳಬಾರದು ಎಂದು ಆಗ್ರಹಿಸಿದರು.

ಕಾಂಗ್ರೆಸ್‌ ಬಂದ ಬಳಿಕ ಅತ್ಯಾಚಾರ, ಮಹಿಳಾ ದೌರ್ಜನ್ಯ ಹೆಚ್ಚಿದೆ. ಕಾರ್ಕಳದಲ್ಲಿ ಹಿಂದೂ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದ ಹಿಂದಿರುವ ಮಾದಕ ದ್ರವ್ಯ ಜಾಲದ ಬಗ್ಗೆ ಕಾರ್ಕಳ ನಗರ ಪೊಲೀಸರು ನಡೆಸಿದ ತನಿಖೆಯಲ್ಲಿ ಹಲವು ಮಹತ್ವದ ವಿಚಾರಗಳು ಬಹಿರಂಗಗೊಂಡಿವೆ. ಇದರ ಹಿಂದೆ ದೊಡ್ಡ ಡ್ರಗ್ಸ್‌ಜಾಲವೇ ಇದೆ. ಬಿಜೆಪಿ ಸರ್ಕಾರ ಇದ್ದಾಗ ವಿಶೇಷ ಅಭಿಯಾನ ನಡೆಸಿ ಡ್ರಗ್ಸ್‌ ನಿಯಂತ್ರಣ ಮಾಡಲಾಗಿತ್ತು. ಈ ಸರ್ಕಾರ ಡ್ರಗ್ಸ್‌ ದಂಧೆಕೋರರಿಗೆ ಅನುಮತಿ ನೀಡಿದೆ. ಇದರಿಂದಾಗಿ ಯುವತಿ ಮೇಲೆ ಅತ್ಯಾಚಾರವಾಗಿದೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

6 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago