Mysore
14
overcast clouds

Social Media

ಸೋಮವಾರ, 15 ಡಿಸೆಂಬರ್ 2025
Light
Dark

ಕಾಂಗ್ರೆಸ್‌ ಸರ್ಕಾರ ಬೀಳಲ್ಲ, 5 ವರ್ಷ ನಡೀಲಿ ಬಿಡ್ರಿ ಎಂದ ಶ್ರೀರಾಮುಲು

ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್‌ ಆಡಳಿತದ ಬಗ್ಗೆ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಪಟ್ಟ ಕೊಟ್ಟಿರುವುದು ಕಾಂಗ್ರೆಸ್‌ ಪಕ್ಷದ ಕೆಲವರಲ್ಲಿಯೇ ಅಸಮಾಧಾನವನ್ನು ಉಂಟುಮಾಡಿದೆ ಎಂಬ ಮಾತುಗಳು ಕೇಳಿಬಂದಿವೆ ಹಾಗೂ ಈ ಕುರಿತು ಚರ್ಚೆಗಳೂ ಸಹ ನಡೆಯುತ್ತಿವೆ.

ಇಂತಹ ವಿಷಯದ ಬಗ್ಗೆ ಇದೀಗ ಬಿಜೆಪಿ ಪಕ್ಷದ ಮುಖಂಡ ಶ್ರೀರಾಮುಲು ಪ್ರತಿಕ್ರಿಯಿಸಿದ್ದು ಕಾಂಗ್ರೆಸ್‌ ಸರ್ಕಾರ ಬೀಳಲ್ಲ ಎಂದಿದ್ದಾರೆ. ಕೋಲಾರದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಶ್ರೀರಾಮುಲು “ಲೋಕಸಭೆ ಚುನಾವಣೆಯೊಳಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ ಎಂಬುದನ್ನು ನಾನು ಒಪ್ಪಲಾರೆ, ಕಾಂಗ್ರೆಸ್‌ ಸರ್ಕಾರ 5 ವರ್ಷ ನಡೀಲಿ ಬಿಡ್ರಿ. ಜನರು ಕಾಂಗ್ರೆಸ್‌ ಪಕ್ಷವನ್ನು ಆರಿಸಿದ್ದಾರೆ. ನಾವು ಆಪರೇಷನ್‌ ಕಮಲ ಮಾಡಲ್ಲ. ಜನರು ಅದನ್ನು ಒಪ್ಪುವುದೂ ಇಲ್ಲ” ಎಂದು ಹೇಳಿಕೆ ನೀಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!