Mysore
19
broken clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಯಾವುದೇ ಕ್ಷಣದಲ್ಲಾದರೂ ರಾಜ್ಯ ಸರ್ಕಾರ ಪತನ: ಸಂಸದ ಜಗದೀಶ್‌ ಶೆಟ್ಟರ್‌ ಭವಿಷ್ಯ

ಹುಬ್ಬಳ್ಳಿ: ಯಾವುದೇ ಕ್ಷಣದಲ್ಲಾದರೂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಭವಿಷ್ಯ ನುಡಿದಿದ್ದಾರೆ.

ರಾಜ್ಯದಲ್ಲಿ ಸಿಎಂ ಹಾಗೂ ಡಿಸಿಎಂ ಸೃಷ್ಟಿ ಚರ್ಚೆ ವಿಚಾರ ಸಂಬಂಧ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಜಗದೀಶ್‌ ಶೆಟ್ಟರ್‌ ಅವರು, ಸರ್ಕಾರದ ವಿರುದ್ಧ ಶಾಸಕರೇ ಅಸಮಾಧಾನ ತೋಡಿಕೊಳ್ಳುತ್ತಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ ಸರ್ಕಾರದಲ್ಲಿ ಒಳಬೇಗುದಿ ಹೆಚ್ಚಾಗುತ್ತಿದೆ. ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು. ಸರ್ಕಾರ ಪತನವೂ ಆಗಬಹುದು. ಅದು ಕಾಂಗ್ರೆಸ್‌ ಪಕ್ಷದ ಶಾಸಕರಿಂದಲೇ ರಾಜ್ಯ ಸರ್ಕಾರ ಪತನವಾಗುತ್ತದೆ. ಆದರೆ ಯಾವಾಗ ಅನ್ನೋದನ್ನು ಹೇಳಲು ಬರೋದಿಲ್ಲ ಎಂದರು.

ರಾಜ್ಯ ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಹಾಕಲು ಬಿಜೆಪಿ ಮೇಲೆ ಬೆರಳು ತೋರಿಸುತ್ತಿದೆ. ಸರ್ಕಾರದ ವ್ಯಾಪ್ತಿಯಲ್ಲೇ ಹಗರಣಗಳನ್ನು ಮುಚ್ಚಿಹಾಕುವ ಕೆಲಸಗಳನ್ನು ಸರ್ಕಾರ ಮಾಡುತ್ತಿದೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಕೇವಲ ನಾಗೇಂದ್ರ ಅವರ ತಲೆದಂಡ ಆಯ್ತು. ಅದನ್ನು ಬಿಟ್ಟು ಮತ್ತೇನೂ ಬೆಳವಣಿಗೆ ಆಗಿಲ್ಲ. ನೆಪಮಾತ್ರಕ್ಕೆ ತನಿಖೆ ನಡೆಯುತ್ತಿದೆ. ಆದರೆ ಅದರಿಂದ ಹೆಚ್ಚಿನ ನಿರೀಕ್ಷೆಯೇನು ಇಲ್ಲ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಕೇವಲ ಸಿಎಂ, ಡಿಸಿಎಂ ಬದಲಾವಣೆ ವಿಚಾರದಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದೆ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.

 

Tags: