Mysore
14
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಕಾಂಗ್ರೆಸ್‌ ಸರ್ಕಾರ ರಾಜ್ಯವನ್ನು ಪಾಕಿಸ್ತಾನ ಮಾಡುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿ

ನವದೆಹಲಿ: ನಾಗಮಂಗಲದಲ್ಲಿ ಗಣೇಶೋತ್ಸವದ ವೇಳೆ ನಡೆದ ಕೋಮು ಘರ್ಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡಲು ಹೊರಟಿದೆ.

ಸರ್ವ ಜನಾಂಗದ ಶಾಂತಿಯ ತೋಟ ಎಂಬಂತಿರುವ ಕರ್ನಾಟಕವನ್ನು ಕಾಂಗ್ರೆಸ್‌ ಸರ್ಕಾರ ಮತ್ತೊಂದು ಪಾಕಿಸ್ತಾನ ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಕಾಂಗ್ರೆಸ್‌ ಓಲೈಕೆ ಆಡಳಿತದಿಂದಾಗಿ ನಮ್ಮ ಕರ್ನಾಟಕದಲ್ಲಿ ಈ ಪರಿಸ್ಥಿತಿ ಬಂದಿದೆ. ಇದಕ್ಕೆ ನಿನ್ನೆ ನಡೆದಿರುವ ನಾಗಮಂಗಲ ಗಲಭೆಯೇ ಕಾರಣ ಎಂದು ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು.

ಮಸೀದಿ ಮುಂದೆ ಗಣಪತಿ ಮೆರವಣಿಗೆ ಹೋಗಬಾರದು ಎಂಬ ಕಾನೂನು ಇದೆಯಾ? ಎಂದು ಪ್ರಶ್ನಿಸಿದ ಅವರು, ಗಣೇಶ ಮೂರ್ತಿ ಇದ್ದರೂ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ದಾರೆ. ಇದೇನಾ ನಾಗರೀಕತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಹಾಗಾಗಿ ಪದೇ ಪದೇ ಈ ರೀತಿಯ ಘಟನೆಗಳು ನಡೆಯುತ್ತಿವೆ. ನಾಗಮಂಗಲ ಘಟನೆಗೆ ರಾಜ್ಯ ಕಾಂಗ್ರೆಸ್‌ ಸರ್ಕಾರವೇ ನೇರ ಹೊಣೆ ಎಂದು ಹರಿಹಾಯ್ದರು.

 

 

Tags:
error: Content is protected !!