ನವದೆಹಲಿ: ನಾಗಮಂಗಲದಲ್ಲಿ ಗಣೇಶೋತ್ಸವದ ವೇಳೆ ನಡೆದ ಕೋಮು ಘರ್ಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡಲು ಹೊರಟಿದೆ.
ಸರ್ವ ಜನಾಂಗದ ಶಾಂತಿಯ ತೋಟ ಎಂಬಂತಿರುವ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ಮತ್ತೊಂದು ಪಾಕಿಸ್ತಾನ ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಕಾಂಗ್ರೆಸ್ ಓಲೈಕೆ ಆಡಳಿತದಿಂದಾಗಿ ನಮ್ಮ ಕರ್ನಾಟಕದಲ್ಲಿ ಈ ಪರಿಸ್ಥಿತಿ ಬಂದಿದೆ. ಇದಕ್ಕೆ ನಿನ್ನೆ ನಡೆದಿರುವ ನಾಗಮಂಗಲ ಗಲಭೆಯೇ ಕಾರಣ ಎಂದು ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು.
ಮಸೀದಿ ಮುಂದೆ ಗಣಪತಿ ಮೆರವಣಿಗೆ ಹೋಗಬಾರದು ಎಂಬ ಕಾನೂನು ಇದೆಯಾ? ಎಂದು ಪ್ರಶ್ನಿಸಿದ ಅವರು, ಗಣೇಶ ಮೂರ್ತಿ ಇದ್ದರೂ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ದಾರೆ. ಇದೇನಾ ನಾಗರೀಕತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಹಾಗಾಗಿ ಪದೇ ಪದೇ ಈ ರೀತಿಯ ಘಟನೆಗಳು ನಡೆಯುತ್ತಿವೆ. ನಾಗಮಂಗಲ ಘಟನೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂದು ಹರಿಹಾಯ್ದರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…