ರಾಜ್ಯ

ಆನ್ಲೈನ್ ಫುಡ್ಗಳ ಮೇಲಿನ ಸೆಸ್ ಹೇರಲು ಸರ್ಕಾರ ನಿರ್ಧಾರ

ಬೆಂಗಳೂರು: ಆನ್‌ಲೈನ್‌ ಫುಡ್‌ ಆಪ್‌ಗಳಾದ ಝೋಮ್ಯಾಟೋ, ಡೋಮಿನೋಸ್‌, ಮತ್ತು ಸ್ವಿಗ್ಗಿಯ ಮೇಲೆ ಸರ್ಕಾರ ಸೆಸ್‌ ಹೇರಲು ನಿರ್ಧಾರ ಮಾಡಿದೆ.

ಈ ವಿಚಾರವಾಗಿ ಸರ್ಕಾರವೂ ಜನತೆಯ ಮೇಲೆ ಹೊಸ ಶುಲ್ಕದ ಬರೆಯನ್ನು ಎಳೆಯಲು ಮುಂದಾಗಿದ್ದು, ಸೆಸ್‌ನಿಂದ ಸಂಗ್ರಹಿಸಲಾಗುವ ಹಣವನ್ನು ಕಾರ್ಮಿಕ ಅಭಿವೃದ್ಧಿಗೆ ಬಳಸಲಾಗುತ್ತದೆ ಎಂದು ತಿಳಿದು ಬಂದಿದೆ. ಇದರಿಂದ ಸರ್ಕಾರ ಗಿಗ್‌ ಕಾರ್ಮಿಕರಿಗೆ ಕಲ್ಯಾಣ ನಿಧಿ ಸೌಲಭ್ಯವನ್ನು ರಚಿಸಲು ಮುಂದಾಗಿದೆ.

ನೂತನ ಶುಲ್ಕ ಹೆಚ್ಚಳ ಮಾಡುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಂತೋಷ್‌ ಲಾಡ್‌ ಅವರು, ಸೆಸ್‌ ಹಾಕಬೇಕೆಂದು ನಿರ್ಧರಿಸಿದ್ದೇವೆ. ಹೀಗಾಗಿ ಈ ವಿಚಾರಕ್ಕೆ ಸಂಬಂಧಿಸಿದಂತೆ 32 ಸಭೆಗಳನ್ನು ಮಾಡಲಾಗಿದೆ. ಅಲ್ಲದೇ, ಅಮೆಜಾನ್‌, ಫ್ಲಿಪ್‌ ಕಾರ್ಟ್‌, ಸ್ವಿಗ್ಗಿ, ಒಳಗೊಂಡಂತೆ ಆನ್‌ಲೈನ್‌ ಕಂಪೆನಿಗಳೊಂದಿಗೆ ಒಪ್ಪಿಗೆ ಪಡೆದಿದ್ದು, ಡ್ರಾಫ್ಟ್‌ನ್ನು ಸಹ ಮಾಡಲಾಗಿದೆ ಎಂದರು.

ಡ್ರಾಫ್ಟ್‌ನಲ್ಲಿ ಸ್ವಲ್ಪ ಬದಲಾವಣೆಯಾಗಬಹುದು. ಆದರೆ, ಗಿಗ್‌ ಕಾರ್ಮಿಕರನ್ನು ಬಳಕೆ ಮಾಡುವ ಎಲ್ಲಾ ಕಂಪನಿಗಳಿಗೆ ಇದು ಅನ್ವಯ ಆಗಲಿದೆ. ರಾಹುಲ್ ಗಾಂಧಿಯವರು ಗಿಗ್ ಕಾರ್ಮಿಕರ ಬಗ್ಗೆ ತಿಳಿಸಿದ್ದರು. ಈ ಕಾರಣದಿಂದ ಅದೇ ಮಾದರಿಯಲ್ಲಿ ಈ ಬಿಲ್‌ ಅನ್ನು ತರುತ್ತಿದ್ದೇವೆ. ಅಲ್ಲದೇ, ನಾವು ಗೂಡ್ಸ್‌ನಲ್ಲಿ ಏನು ಸೆಸ್‌ ಹಾಕಲು ಆಗುವುದಿಲ್ಲ. ಹೀಗಾಗಿ ನಾವು ಟ್ರಾನ್ಸ್‌ಪೋರ್ಟ್‌ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

 

ಆಂದೋಲನ ಡೆಸ್ಕ್

Recent Posts

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

50 mins ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

1 hour ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

1 hour ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

2 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

2 hours ago

ನಾಳೆ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ

ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ…

2 hours ago