ಬೆಂಗಳೂರು: ಯುವಕರು ಪದವಿ ಪಡೆದರೆ ಯುವನಿಧಿ ಕೊಡಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ 8 ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಮುಂದಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಭಾರೀ ಖತರ್ನಾಕ್‌ಗಳು. ಮೊದಲು ಮಂಡ್ಯ ವಿವಿ ಮುಚ್ಚುತ್ತಿದ್ದಾರೆ. ಮಂಡ್ಯ ಗಂಡು ನಾಡು, ಅಲ್ಲೇ ವಿವಿಗೆ ಕೊಡಲಿ ಪೆಟ್ಟು ಹಾಕುತ್ತಿದ್ದಾರೆ. ರಾಜ್ಯ ಸರ್ಕಾರ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ ಕೊಡುತ್ತಿದೆ. ಮಾರಿ ಕಣ್ಣು ಹೋರಿ ಮೇಲೆ ಅನ್ನುವಂತೆ ಸಿದ್ದರಾಮಯ್ಯ ಕಣ್ಣು ವಿವಿಗಳ ಮೇಲೆ ಬಿದ್ದಿದೆ. 9 ವಿವಿಗಳನ್ನು ಮುಚ್ಚಲು ಹೊರಟಿರುವ ಸರ್ಕಾರದ ನಿರ್ಧಾರವನ್ನು ಬಿಜೆಪಿ ಬಲವಾಗಿ ವಿರೋಧಿಸುತ್ತದೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು ಕೆಆರ್‌ಎಸ್ ಪಕ್ಕ ಅಮ್ಯೂಸ್‌ಮೆಂಟ್ ಪಾರ್ಕ್ ಮಾಡುತ್ತಾರಂತೆ. ಇದಕ್ಕೆ 1000 ಕೋಟಿ ರೂ ಕೊಡುತ್ತಿದ್ದಾರೆ. ಜಲಕ್ರೀಡೆಗೆ ಹಣ ನೀಡುತ್ತಾರೆ. ಆದರೆ ವಿಶ್ವವಿದ್ಯಾಲಯ ಮುಚ್ಚಿಸುತ್ತಾರೆ. ಈ ಕಾಂಗ್ರೆಸ್‌ನವರು ಅಪರೂಪದ ಪೀಸ್‌ಗಳು ಎಂದು ವಾಗ್ದಾಳಿ ನಡೆಸಿದರು.
ಇನ್ನು ವಿವಿ ಮುಚ್ಚುತ್ತೇವೆ ಎನ್ನುವವರು ವೈನ್ ಸ್ಟೋರ್, ಬಾರ್‌ಗಳನ್ನು ಮುಚ್ಚಿ ನೋಡೋಣ. ಇದೇ ಕಾಂಗ್ರೆಸ್ ನೀತಿ. ನಮ್ಮ ವಿದ್ಯಾರ್ಥಿಗಳು ಅಧ್ಯಯನಕ್ಕೆ ಪರ ರಾಜ್ಯಕ್ಕೆ ಹೋಗಬೇಕೇ ಎಂದು ಪ್ರಶ್ನಿಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…