ರಾಜ್ಯ

ಕಾಂಗ್ರೆಸ್‌ನವರು ಭಾರೀ ಖತರ್ನಾಕ್‌ಗಳು: ಪ್ರತಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಯುವಕರು ಪದವಿ ಪಡೆದರೆ ಯುವನಿಧಿ ಕೊಡಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್‌ ಸರ್ಕಾರ 8 ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಮುಂದಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಭಾರೀ ಖತರ್ನಾಕ್‌ಗಳು. ಮೊದಲು ಮಂಡ್ಯ ವಿವಿ ಮುಚ್ಚುತ್ತಿದ್ದಾರೆ. ಮಂಡ್ಯ ಗಂಡು ನಾಡು, ಅಲ್ಲೇ ವಿವಿಗೆ ಕೊಡಲಿ ಪೆಟ್ಟು ಹಾಕುತ್ತಿದ್ದಾರೆ. ರಾಜ್ಯ ಸರ್ಕಾರ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ ಕೊಡುತ್ತಿದೆ. ಮಾರಿ ಕಣ್ಣು ಹೋರಿ ಮೇಲೆ ಅನ್ನುವಂತೆ ಸಿದ್ದರಾಮಯ್ಯ ಕಣ್ಣು ವಿವಿಗಳ ಮೇಲೆ ಬಿದ್ದಿದೆ. 9 ವಿವಿಗಳನ್ನು ಮುಚ್ಚಲು ಹೊರಟಿರುವ ಸರ್ಕಾರದ ನಿರ್ಧಾರವನ್ನು ಬಿಜೆಪಿ ಬಲವಾಗಿ ವಿರೋಧಿಸುತ್ತದೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು ಕೆಆರ್‌ಎಸ್‌ ಪಕ್ಕ ಅಮ್ಯೂಸ್‌ಮೆಂಟ್ ಪಾರ್ಕ್‌ ಮಾಡುತ್ತಾರಂತೆ. ಇದಕ್ಕೆ 1000 ಕೋಟಿ ರೂ ಕೊಡುತ್ತಿದ್ದಾರೆ. ಜಲಕ್ರೀಡೆಗೆ ಹಣ ನೀಡುತ್ತಾರೆ. ಆದರೆ ವಿಶ್ವವಿದ್ಯಾಲಯ ಮುಚ್ಚಿಸುತ್ತಾರೆ. ಈ ಕಾಂಗ್ರೆಸ್‌ನವರು ಅಪರೂಪದ ಪೀಸ್‌ಗಳು ಎಂದು ವಾಗ್ದಾಳಿ ನಡೆಸಿದರು.

ಇನ್ನು ವಿವಿ ಮುಚ್ಚುತ್ತೇವೆ ಎನ್ನುವವರು ವೈನ್‌ ಸ್ಟೋರ್‌, ಬಾರ್‌ಗಳನ್ನು ಮುಚ್ಚಿ ನೋಡೋಣ. ಇದೇ ಕಾಂಗ್ರೆಸ್‌ ನೀತಿ. ನಮ್ಮ ವಿದ್ಯಾರ್ಥಿಗಳು ಅಧ್ಯಯನಕ್ಕೆ ಪರ ರಾಜ್ಯಕ್ಕೆ ಹೋಗಬೇಕೇ ಎಂದು ಪ್ರಶ್ನಿಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

48 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

50 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

52 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

55 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

60 mins ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

1 hour ago