Mysore
23
overcast clouds

Social Media

ಗುರುವಾರ, 15 ಜನವರಿ 2026
Light
Dark

ಬಣ ಬಡಿದಾಟದಿಂದಲೇ ಕಾಂಗ್ರೆಸ್‌ ಸರ್ಕಾರ ಪತನ: ಸಂಸದ ಜಗದೀಶ್‌ ಶೆಟ್ಟರ್‌

ಹುಬ್ಬಳ್ಳಿ: ಸಿಎಂ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲಿ ಫೈಟ್‌ ಶುರುವಾಗಿದ್ದು, ಇದೇ ಕಾರಣಕ್ಕೆ ಈ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಭವಿಷ್ಯ ನುಡಿದಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದಾಗಲೇ ಸಿಎಂ ಆಯ್ಕೆಯಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಈ ವಿಚಾರದಲ್ಲಿ ಆರಂಭದಲ್ಲೇ ಒಂದು ಒಪ್ಪಂದ ಆಗಿದೆ ಎಂಬ ಮಾತಿದೆ. ಸಹಜವಾಗಿ ಈಗ ಸಿಎಂ ಸ್ಥಾನಕ್ಕೆ ಒಳಗೊಳಗೆ ಫೈಟ್‌ ನಡೆಯುತ್ತಿದೆ. ಇದೇ ಕಾರಣದಿಂದಲೇ ಕಾಂಗ್ರೆಸ್‌ ಸರ್ಕಾರ ಪತನವಾಗುತ್ತದೆ ಎಂದು ಭವಿಷ್ಯ ನುಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಡಿಕೆಶಿ ಹಾಗೂ ಸಿದ್ದರಾಮಯ್ಯ ತಂತ್ರ ಪ್ರತಿತಂತ್ರ ಮಾಡುತ್ತಿದ್ದಾರೆ. ಆದ್ದರಿಂದ ಬಹಳ ದಿನ ಈ ಸರ್ಕಾರ ಉಳಿಯಲ್ಲ. ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದೆ ಎಂದು ಲೇವಡಿ ಮಾಡಿದರು.

ಇನ್ನು ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ದಾಖಲೆ ಮಾಡಲು ಹೊರಟಿದ್ದಾರೆ. ಅರಸು ಅವರಿಗಿಂತ ಹೆಚ್ಚು ಅವಧಿಗೆ ಸಿಎಂ ಆಗಿದ್ದೆ ಎಂದು ಸಾಬೀತು ಮಾಡಲು ಹೊರಟಿದ್ದಾರೆ. ಆದರೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹಗರಣಗಳು ಎಗ್ಗಿಲ್ಲದೇ ನಡೆಯುತ್ತಿವೆ ಎಂದು ಹೇಳಿದರು.

 

 

 

Tags:
error: Content is protected !!