ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಭವಿಷ್ಯ ಡೋಲಾಯಮಾನ ಸ್ಥಿತಿಯಲ್ಲಿದೆ. ಅದು ಇನ್ನು 3 ತಿಂಗಳು, 6 ತಿಂಗಳು ಅಥವಾ ಒಂದು ವರ್ಷ ಅಧಿಕಾರದಲ್ಲಿರುತ್ತದೋ ಇಲ್ಲವೋ ಅಂತ ಕುಮಾರಸ್ವಾಮಿಯವರು ಹೇಳಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು.
ನೂತನ ಸಂಸದರಿಗೆ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಬೆಲೆ ಏರಿಕೆ ವಿಚಾರವಾಗಿ ಮಾತನಾಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದಿಂದ ಜನ ಬೇಸತ್ತು ಹೋಗಿದ್ದಾರೆ, ಪೆಟ್ರೋಲ್ ಬೆಲೆಯನ್ನು ಹೆಚ್ಚಿಸುವ ಮೂಲಕ ಸರ್ಕಾರ ಜನರನ್ನು ವಂಚಿಸಿದೆ. ಬಿಜೆಪಿ ಮತ್ತು ಜೆಡಿಎಸ್ ಒಂದಾಗಿರೋದು ಕಾಂಗ್ರೆಸ್ ನಾಯಕರ ನಿದ್ದೆ ಹಾಳುಮಾಡಿದೆ ಎಂದರು.
ತುಮಕೂರು ಲೋಕಸಭಾ ಕ್ಷೇತ್ರದಿಂದ ನಾನು ಸೋಲುತ್ತೇನೆ ಅಂತ ಕಾಂಗ್ರೆಸ್ ನಾಯಕರು ಹೇಳುತ್ತಿದ್ದರು. ಆದರೆ ಕ್ಷೇತ್ರದ ಬುದ್ಧಿಜೀವಿಗಳು, ಬಡವರು ಮತ್ತು ಕಡುಬಡುವರು ನನ್ನನ್ನ ಕೈಹಿಡಿದರು ಮತ್ತು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಸಂಘಟಿತ ಪರಿಶ್ರಮದಿಂದ ನಾನು ಗೆಲ್ಲುವುದು ಸಾಧ್ಯವಾಯಿತು. ಕನಿಷ್ಟ 15 ಸೀಟು ಗೆಲ್ಲುತ್ತೇವೆ ಎಂದಿದ್ದ ಕಾಂಗ್ರೆಸ್ ಕೇವಲ 9 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡರೆ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯು 19ಸೀಟುಗಳನ್ನು ಗೆದ್ದಿತು ಎಂದು ಹೇಳಿದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…