ಬೆಂಗಳೂರು: ರಾಜ್ಯದಲ್ಲಿ ಜಾರಿಯಲ್ಲಿರುವ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಹೇಳಿದ್ದಾರೆ.
ಅವರು ಇಂದು (ಆಗಸ್ಟ್ 25) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವಿಜಯನಗರ ಬಸ್/ಮೆಟ್ರೊ ನಿಲ್ದಾಣದ ಬಳಿ ಮುಖ್ಯ ಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಹವಾನಿಯಂತ್ರಿತ ಮಾರುಕಟ್ಟೆ ಕೃಷ್ಣದೇವರಾಯ ಪಾಲಿಕೆ ಬಜಾರ್ ನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ನಮ್ಮ ಸರ್ಕಾರ ಜನರಿಗೆ ಮಾತು ನೀಡಿದ್ದಂತೆ ಎಲ್ಲಾ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಅಧಿಕಾರಕ್ಕೆ ಬಂದು ಒಂದು ವರ್ಷ ಮೂರು ತಿಂಗಳಲ್ಲಿ ನಮ್ಮ ಐದು ಕಾರ್ಯಕ್ರಮಗಳನ್ನು ಜಾರಿ ಮಾಡಲಾಗಿದೆ. ಎಲ್ಲಾ ಧರ್ಮ, ಜಾತಿಯ ಬಡವರಿಗೆ ಈ ಕಾರ್ಯಕ್ರಮಗಳನ್ನು ತಲುಪಿಸುವ ಪ್ರಯತ್ನ ಮಾಡುತ್ತಿದ್ದೇವೆ. ವಿರೋಧ ಪಕ್ಷದವರು ಈ ಕಾರ್ಯಕ್ರಮಗಳ ಜಾರಿಗೆ ಮುನ್ನ ಹಾಗೂ ನಂತರದಲ್ಲಿ ಬಹಳ ಟೀಕೆ ಮಾಡುತ್ತಿದ್ದರು. ಲೋಕಸಭಾ ಚುನಾವಣೆ ನಂತರ ಯೋಜನೆಗಳನ್ನು ನಿಲ್ಲಿಸುವುದಾಗಿಯೂ ಹೇಳಿದ್ದರು. ಯಾವ ಕಾರಣಕ್ಕೂ ಕೂಡ ಐದು ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದರು. ವಿರೋಧ ಪಕ್ಷದವರು ಈ ಕಾರ್ಯಕ್ರಮಗಳ ವಿರುದ್ಧವಾಗಿದ್ದಾರೆ. ಶಕ್ತಿ, ಅನ್ನ ಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳು ಮಹಿಳೆಯರಿಗೆ ಸಾಮಾಜಿಕ, ಆರ್ಥಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳಾಗಿವೆ. ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಸಾಮಾಜಿಕ, ಆರ್ಥಿಕ ಸ್ವಾತಂತ್ಯ್ರ ದೊರೆತಾಗ ಮಾತ್ರ ದೇಶದಲ್ಲಿ ಬಡತನ ತೊಲಗಿಸಲು, ಸಾಮಾಜಿಕ ಸಮಾನತೆ ತರಲು ಸಾಧ್ಯವಾಗುತ್ತದೆ ಎಂದರು.
ಮೈಸೂರು : ಸಹಜ ಸಮೃದ್ಧ ಸಂಸ್ಥೆ ಹಾಗೂ ದೇಸಿರಿ ನ್ಯಾಚುರಲ್ಸ್ ಸಹಯೋಗದಲ್ಲಿ ನಂಜರಾಜ ಬಹದ್ದೂರ್ ಛತ್ರದಲ್ಲಿ ಆಯೋಜಿಸಿರುವ ಮೂರು ದಿನಗಳ…
ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯನ್ನೇ ಸೃಷ್ಟಿ ಮಾಡಿದ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಾಪ್ಟರ್ 1 ಚಿತ್ರವು…
ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ…
ಚೆನ್ನೈ : ದಳಪತಿ ವಿಜಯ್ ಅವರ ಮುಂಬರುವ ಚಿತ್ರ ಜನ ನಾಯಗನ್‍ಗೆ ಸೆನ್ಸಾರ್ ಪತ್ರ ನೀಡುವಂತೆ ಮದ್ರಾಸ್ ಹೈಕೋರ್ಟ್ ಮಹತ್ವದ…
ಬೆಂಗಳೂರು : ರಾಕಿ ಬಾಯ್ ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ 24 ಗಂಟೆಯಲ್ಲಿ ಬರೋಬ್ಬರಿ 200 ಮಿಲಿಯನ್ ಅಂದರೆ 20…
ನಂಜನಗೂಡು : ಇತ್ತೀಚಿನ ದಿನಗಳಲ್ಲಿ ನಂಜನಗೂಡಿನ ಕಾಡಂಚಿನ ಭಾಗಗಳಲ್ಲಿ ಆನೆ ಹಾವಳಿ ಹೆಚ್ಚಾಗಿದೆ. ಕಾಡಾನೆಗಳಿಂದ ತಮ್ಮ ಕೃಷಿ ಉಳಿಸುವ ಜೊತೆಗೆ…