ಬೆಂಗಳೂರು : ರಾಜ್ಯ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ತಾತ್ಕಾಲಿಕ ಬ್ರೇಕ್ ದೊರೆತ ಬೆನ್ನಲ್ಲೇ ಬಿಜೆಪಿಯ ಪ್ರತ್ಯೇಕ ಬಣವೊಂದರ ನಾಯಕರು ದೆಹಲಿಗೆ ಪ್ರಯಾಣಿಸಿದ್ದಾರೆ.
ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಶ್ರೀಮಂತ್ ಪಾಟೀಲ್, ಬಿ.ವಿ.ನಾಯಕ್ ಮತ್ತು ಬಸನಗೌಡ ಪಾಟೀಲ್ ಸೇರಿದಂತೆ ಹಲವು ನಾಯಕರು ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.
ಈ ಭೇಟಿಯ ಕುರಿತು ಪ್ರತಿಕ್ರಿಯಿಸಿರುವ ಕುಮಾರ್ ಬಂಗಾರಪ್ಪ, ಹೈಕಮಾಂಡ್ ಜತೆ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಕಾಲಾವಕಾಶ ಸಿಕ್ಕಿದೆ ಎಂದು ಹೇಳಿದ್ದಾರೆ. ಸದ್ಯಕ್ಕೆ ಅಗತ್ಯ ಇರುವ ವಿಷಯಗಳ ಬಗ್ಗೆ ಚರ್ಚಿಸಿ, ನಾಳೆ ಬೆಳಗ್ಗೆ ಹೆಚ್ಚಿನ ಮಾಹಿತಿ ನೀಡುವ ಭರವಸೆ ನೀಡಿದ್ದಾರೆ. ಈ ಭೇಟಿಯು ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆಗೆ ಸಂಬಂಧಿಸಿದ್ದಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬದಲಾಗಿ, ಸಂಘಟನಾತ್ಮಕ ವಿಷಯಗಳು, ವಿಶೇಷವಾಗಿ 2028 ರ ಚುನಾವಣೆಗೆ ಸಂಬಂಧಿಸಿದ ವಿಚಾರಗಳು ಚರ್ಚೆಯಾಗಲಿವೆ ಎಂದು ಅವರು ತಿಳಿಸಿದ್ದಾರೆ.
ಮೈಸೂರು: ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿಉರಿದಿದ್ದು,ಕೆಲಕಾಲ ಆತಂಕ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್…
ಮೈಸೂರು : ನಗರದ ಅಪೋಲೋ ಬಿಜಿಎಸ್ ಆಸ್ಪತ್ರೆಯು ಮೈಸೂರಿನಲ್ಲಿ ಮೊದಲ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದೆ. ಇದು ಈ ವ್ಯಾಪ್ತಿಯಲ್ಲಿ…
ಬೆಂಗಳೂರು : ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ…
ಬಾಗಲಕೋಟೆ : 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು…
ಹೊಸದಿಲ್ಲಿ : ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ…
ಬೆಂಗಳೂರು : ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಡಿಜಿಪಿ ರಾವ್ ಅವರು ಹತ್ತು…