ರಾಜ್ಯ

ರಾಜ್ಯದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ನಾಯಕತ್ವ ಗೊಂದಲ ಸೃಷ್ಟಿ ಮಾಡಿಲ್ಲ: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್‌ ಸೃಷ್ಟಿ ಮಾಡಿಲ್ಲ. ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್‌ ಅಂದರೆ ಹೇಗೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ರಾಜ್ಯದಲ್ಲಿ ನಾಯಕತ್ವದ ಗೊಂದಲ ವಿಚಾರ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಗೊಂದಲವನ್ನು ಹೈಕಮಾಂಡ್‌ ಮಾಡಿಲ್ಲ. ಇಲ್ಲಿನ ನಾಯಕರು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್‌ ಎಂದು ಹೇಳಿದ್ರೆ ಹೇಗೆ ಎಂದು ಪ್ರಶ್ನೆ ಮಾಡಿದರು.

ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್‌ ಯಾರೋ ಒಬ್ಬ ನಾಯಕನಿಂದ ಬೆಳೆದಿದ್ದಲ್ಲ. ಹೀಗಾಗಿ ಯಾರೊಬ್ಬರೂ ನನ್ನಿಂದ ಅಧಿಕಾರಕ್ಕೆ ಬಂತು, ನಾನೇ ಪಕ್ಷ ಕಟ್ಟಿದ್ದೇನೆಂದು ಹೇಳಬಾರದು. ಕಾಂಗ್ರೆಸ್‌ ಪಕ್ಷ ಕಾರ್ಯಕರ್ತರಿಂದ ಕಟ್ಟಿದ ಪಕ್ಷ. ಪಕ್ಷ ಅಂದ ಮೇಲೆ ಎಲ್ಲರ ಪಾತ್ರವೂ ಇರುತ್ತದೆ. ಕೆಲ ಕಾರ್ಯಕರ್ತರು ಕೂಡ ಒಬ್ಬರಿಂದಲೇ ಪಕ್ಷ ಇದೆ ಎನ್ನಬಾರದು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

4 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

6 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

6 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

10 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

15 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

15 hours ago