ನವದೆಹಲಿ : ಲೋಕಸಭೆ ವಿಪಕ್ಷ ನಾಯಕರಾದ ರಾಹುಲ್ ಗಾಂಧಿಗೆ ಅಭಿನಂದನೆ ಸಲ್ಲಿಸುವ ನೆಪದಲ್ಲಿ ಸಿದ್ದರಾಮಯ್ಯ ಹಾಗೂ ತಂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ಮಾಡಿದ್ದಾರೆ.
ಈ ವೇಳೆ ಹೆಚ್ಚುವರಿ ಡಿಸಿಎಂ , ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಚರ್ಚೆ ಮಾಡಿದ್ದು, ಬಹಿರಂಗವಾಗಿ ಯಾರು ಕೂಡ ಹೇಳಿಕೆಗಳನ್ನ ನೀಡದಂತೆ ಸಚಿವರಿಗೆ ಹಾಗೂ ಶಾಸಕರಿಗೆ ಸೂಚನೆ ನೀಡಿ , ನಾಯಕರ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗುವುದು ಬೇಡ. ಸೂಕ್ತ ಸಮಯದಲ್ಲಿ ನಿರ್ಧಾರವನ್ನು ಕೈಗೊಳ್ಳಿ ಎಂದು ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಹೇಳಿದ್ದಾರೆ.
ಇದೇ ವೇಳೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಿಂದ ಹಿನ್ನಡೆಯಾಗಿದೆ. ಹಳೆ ಮೈಸೂರು ಭಾಗದಲ್ಲಿ ನಾವು ನಾಲ್ಕು ಸ್ಥಾನ ಗೆಲ್ಲಬಹುದಿತ್ತು ಅಲ್ವಾ ಎಂದು ಸಿದ್ದು ಗಮನಕ್ಕೆ ತಂದಿದ್ದಾರೆ. ಇನ್ನು ಹೆಚ್ಚುವರಿ ಡಿಸಿಎಂ ಗೆ ನಾಯಕರು ಆಗ್ರಹಿಸುತ್ತಿರುವುದರಿಂದ ನಾಯಕರನ್ನು ಸಮಾಧಾನ ಪಡಿಸಲು ಹೈಕಮಾಂಡ್ ತಂತ್ರಗಾರಿಗೆ ಮಾಡುತ್ತಿದ್ದು, ಒನ್ ಮ್ಯಾನ್ ಒನ್ ಪೋಸ್ಟ್ ಪಾಲಿಸಿ ಜಾರಿಗೆ ತರುವ ಸಾಧ್ಯತೆ ಇದೆ ಎನ್ನಲಾಗಿದೆ. ಮುಂದಿನ ತಿಂಗಳ ವೇಳೆಗೆ ಕೆಪಿಸಿಸಿಗೆ ನೂತನ ಅಧ್ಯಕ್ಷರನ್ನ ನೇಮಕ ಮಾಡುವ ಸಾಧ್ಯತೆ ಇದೆ. ಈ ಮೂಲಕ ಅಸಮಾಧಾನಿತರನ್ನ ಸಮಾಧಾನಪಡಿಸಲು ಹೈಕಮಾಂಡ್ ಮುಂದಾಗಿದೆ.





