Mysore
24
clear sky

Social Media

ಸೋಮವಾರ, 23 ಮಾರ್ಚ್ 2026
Light
Dark

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Training program for KAS Taluk Nodal Officers inaugurated by siddaramaiah

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ನಾಮಪತ್ರ ಸಲ್ಲಿಕೆ ವೇಳೆ ಹಾಜರಿದ್ದು ಶುಭ ಕೋರಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪನವರು 6 ಬಾರಿ ಶಾಸಕರಾಗಿದ್ದು, ಅವರ ಮಗ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್‌ ರವರು 2 ಬಾರಿ ಶಾಸಕರಾಗಿ ಜನರಿಂದ ಆಯ್ಕೆಯಾಗಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಬಲವಾಗಿದೆ. ಶಾಮನೂರು ಶಿವಶಂಕರಪ್ಪ ನವರು ಮಂತ್ರಿ, ಸಂಸದರಾಗಿ, ಶಾಸಕರಾಗಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಜನಮನದಲ್ಲಿ ನೆಲೆಸಿದ್ದಾರೆ. ಕಾಂಗ್ರೆಸ್ ನಲ್ಲಿ ನಾಯಕರಾಗಿದ್ದವರು ಮೃತರಾದರೆ, ಅವರ ಕುಟುಂಬದವರಿಗೆ ಟಿಕೆಟ್ ನೀಡುವ ಪ್ರತೀತಿಯನ್ನು ಪಕ್ಷ ಬೆಳೆಸಿಕೊಂಡು ಬಂದಿದೆ. ಆದ್ದರಿಂದ ಸಮರ್ಥ ಶಾಮನೂರು ರವರಿಗೆ ಟಿಕೆಟ್ ನೀಡಲಾಗಿದೆ. ಈ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ ಶಾಮನೂರು ಅವರು ನಾಮಪತ್ರ ಸಲ್ಲಿಕೆಯಲ್ಲಿ ಇತರರೊಂದಿಗೆ ಭಾಗಿಯಾಗಿದ್ದೇನೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯು ಗ್ಯಾರಂಟಿಗಳ ಜಾರಿಯಲ್ಲಿ ನಂ.1: ಕಾಂಗ್ರೆಸ್ ವಿವಿಧ ಜಾತಿಧರ್ಮ ವರ್ಗಗಳ ಎಲ್ಲರನ್ನೊಳಗೊಂಡ ಪಕ್ಷ. ಮಹಿಳೆಯರು, ರೈತರು, ಹಿಂದು, ಅಲ್ಪಸಂಖ್ಯಾತರು, ಕಾರ್ಮಿಕರ ಒಳಗೊಂಡ ಪಕ್ಷವಾಗಿದ್ದು, ಎಲ್ಲರನ್ನೊಳಗೊಂಡಿರುವ ಅಭಿವೃದ್ಧಿಯಲ್ಲಿ ನಂಬಿಕೆಯಿಟ್ಟಿರುವ ಪಕ್ಷ. ನುಡಿದಂತೆ ನಡೆದು, ಜನರಿಗೆ ನೀಡಲಾದ ಭರವಸೆಗಳನ್ನು ಈಡೇರಿಸಿರುವ ಪಕ್ಷ. ಕಳೆದ ಬಾರಿ ನೀಡಲಾಗಿದ್ದ ಎಲ್ಲ ಭರವಸೆಗಳನ್ನು ಮೂರು ವರ್ಷಗಳಲ್ಲಿ ಭಾಗಶ: ಪೂರೈಸಲಾಗಿದೆ. ಬಜೆಟ್ ನ್ನು ಅವಲೋಕಿಸಿದರೆ ನುಡಿದಂತೆ ನಡೆಯುವ ನಮ್ಮ ಮಾತನ್ನು ನಿರೂಪಿಸಲಾಗಿದೆ., ದಾವಣಗೆರೆ ಜಿಲ್ಲೆಯು ಗ್ಯಾರಂಟಿಗಳ ಜಾರಿಯಲ್ಲಿ ನಂ.1 ಆಗಿದೆ ಎಂದರು.

Tags:
error: Content is protected !!