ರಾಜ್ಯ

ಕಾಂಗ್ರೆಸ್ ಸೇಡಿನ ರಾಜಕೀಯ ಮಾಡುತ್ತಿದೆ : ಬಿಎಸ್​ ಯಡಿಯೂರಪ್ಪ

ಬೆಂಗಳೂರು : ಈ ತಿಂಗಳ ಅಂತ್ಯದಲ್ಲಿ ಮೂರು ದಿನ ವಿಧಾನಸೌಧ ಅಥವಾ ಫ್ರೀಡಂಪಾರ್ಕ್​ನಲ್ಲಿ ಸತ್ಯಾಗ್ರಹ ಮಾಡ್ತೇನೆ. ನಾಳೆ ಸತ್ಯಾಗ್ರಹದ ದಿನಾಂಕ ನಿಗದಿ ಮಾಡುತ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಮುನಿರತ್ನ ಕ್ಷೇತ್ರದಲ್ಲಿ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳಿಗೆ ಅನುದಾನ ನಿಲ್ಲಿಸಿ ಗೊಂದಲ ಮಾಡಿದ್ದಾರೆ. ರಾಜ್ಯದಲ್ಲಿ ಎಲ್ಲೂ ಕೂಡ ಗುತ್ತಿಗೆದಾರರು ಕೆಲಸ ಮಾಡುತ್ತಿಲ್ಲ. ಹಳೇ ಕೆಲಸಕ್ಕೂ 7ರಿಂದ 8 ಪರ್ಸೆಂಟ್​ ಕಮಿಷನ್ ಕೇಳುತ್ತಿದ್ದಾರೆ. ಈ ರೀತಿಯ ಸೇಡಿನ ರಾಜಕಾರಣ ನಿರೀಕ್ಷೆ ಮಾಡಿರಲಿಲ್ಲ. ಬೆಳಗಾವಿ ಅಧಿವೇಶನಕ್ಕೂ ಮುನ್ನ ಸಾಂಕೇತಿಕ ಸತ್ಯಾಗ್ರಹ ಮಾಡ್ತೇವೆ. ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಲು ನಮ್ಮ ಶಾಸಕರಿಗೆ ಹೇಳುತ್ತೇನೆ ಎಂದು ಕಾಂಗ್ರೆಸ್ ವಿರುದ್ಧ ಬಿ.ಎಸ್​.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಇಂದು ಬೆಂಗಳೂರು ನಗರ ಪ್ರದಕ್ಷಿಣೆ ಕೈಗೊಂಡಿದ್ದ ಮಾಜಿ ಸಿಎಂ ಯಡಿಯೂರಪ್ಪ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ರೌಂಡ್ಸ್ ಹಾಕಿದರು. ಆರ್​.ಆರ್.ನಗರ ಕ್ಷೇತ್ರದಲ್ಲಿ ಸ್ಥಗಿತಗೊಂಡ ಕಾಮಗಾರಿಗಳ ವೀಕ್ಷಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ಮುನಿರತ್ನ ಕ್ಷೇತ್ರದಲ್ಲಿ ಸೇಡಿನ ರಾಜಕಾರಣ ನಡೆಯುತ್ತಿದೆ. ಅಭಿವೃದ್ಧಿ ಕಾರ್ಯಗಳಿಗೆ ಹಣ ಮಂಜೂರು ಮಾಡಿ ಅರ್ಧಂಬರ್ಧ ಕೆಲಸ ನಿಲ್ಲಿಸಿ ಗೊಂದಲ ಮಾಡಿದ್ದಾರೆ. ಸತ್ಯಾಗ್ರಹ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತೇನೆ. ರಾಜ್ಯದಲ್ಲಿ ಎಲ್ಲೂ ಕೂಡಾ ಗುತ್ತಿಗೆದಾರರು ಕೆಲಸ ಮಾಡುತ್ತಿಲ್ಲ. ಹಳೆಯ ಕೆಲಸಕ್ಕೂ 7-8 % ಕಮಿಷನ್ ಕೇಳುತ್ತಿದ್ದಾರೆ. ಈ ರೀತಿಯ ಸೇಡಿನ ರಾಜಕಾರಣ ನಿರೀಕ್ಷೆ ಮಾಡಿರಲಿಲ್ಲ. ರಾಜರಾಜೇಶ್ವರಿ ನಗರದಲ್ಲಿ ಕೆಲವು ರಸ್ತೆ ನೋಡಿದಾಗ ಹಳ್ಳಿಯಲ್ಲಿದ್ದೇವೋ ಎಂಬ ಅನುಮಾನ ಬರುತ್ತದೆ. ಬೆಳಗಾವಿ ಅಧಿವೇಶನಕ್ಕೂ ಮೊದಲು ಸಾಂಕೇತಿಕ ಸತ್ಯಾಗ್ರಹ ಮಾಡುತ್ತೇವೆ. ರಾಜರಾಜೇಶ್ವರಿ ನಗರದ 126 ಕೋಟಿ ಅನುದಾನ ವಾಪಸ್ ಕೊಡಿಸಲು ಸರ್ಕಾರದ ಜೊತೆ ಮಾತಾಡಲು ಇದುವರೆಗೆ ನನಗೆ ಯಾರೂ ಸಿಕ್ಕಿಲ್ಲ. ಮಾತಾಡುತ್ತೇನೆ, ಪ್ರಯತ್ನ ಮಾಡುತ್ತೇನೆ. ಮಾಡಲಿಲ್ಲ ಅಂದರೆ ಹೋರಾಟ ಅನಿವಾರ್ಯ. ಅದನ್ನು ನಮಗೆ ಹೊಸದಾಗಿ ಹೇಳಿಕೊಡಬೇಕಾಗಿಲ್ಲ. ಗುತ್ತಿಗೆದಾರರು ಕೆಲಸ ಮಾಡಲು ರೆಡಿ ಇಲ್ಲ, ಬಿಟ್ಟು ಓಡಿ ಹೋಗುತ್ತಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ಮಾಡಲು ನಮ್ಮ ಶಾಸಕರಿಗೆ ಹೇಳುತ್ತೇನೆ ಎಂದರು.

ಇನ್ನು ದೀಪಾವಳಿ ಬಳಿಕ ಕಾಂಗ್ರೆಸ್ ಗೆ ಶಾಸಕರು ಹೋಗುವ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ ಬಿಎಸ್​ವೈ, ಯಾರು ಎಲ್ಲಿ ಬೇಕಾದರೂ ಹೋಗಲಿ. ಅದರ ಬಗ್ಗ ನಾನು ಚಿಂತೆ ಮಾಡುತ್ತಿಲ್ಲ. ವಿಪಕ್ಷವಾಗಿ ಕೆಲಸ ಮಾಡುವ ಬಗ್ಗೆ ನಾನು ಯೋಚನೆ ಮಾಡುತ್ತಿದ್ದೇನೆ. ಬೇರೆ ವಿಷಯದ ಬಗ್ಗೆ ಚರ್ಚೆ ಮಾಡಲು ನಾನು ಇಷ್ಟಪಡಲ್ಲ ಎಂದರು. ಇದೇ ವೇಳೆ ಅನುದಾನ ತಡೆ ಹಿಡಿಯಲು ಅಕ್ರಮ ಕಾಮಗಾರಿಗಳು ಕಾರಣ ಎಂಬ ಡಿಸಿಎಂ ಹೇಳಿಕೆ ವಿಚಾರ ಸಂಬಂಧ ಬಿಎಸ್​ವೈ ಮಾತನಾಡಿದ್ದು, ಅಕ್ರಮ ಕಾಮಗಾರಿ ಆಗಿದ್ದರೆ ಅದನ್ನು ತನಿಖೆ ಮಾಡಿಸಿ ಕ್ರಮ ತೆಗೆದುಕೊಳ್ಳಲಿ. ಅದನ್ನು ಬಿಟ್ಟು ಎಲ್ಲಾ ಕಾಮಗಾರಿಗಳನ್ನು ತಡೆ ಹಿಡಿಯುವುದು ಎಷ್ಟು ಸರಿ? ಇದನ್ನು ನಾನು ಡಿ.ಕೆ. ಶಿವಕುಮಾರ್ ಅವರಿಗೆ ಕೇಳುತ್ತೇನೆ. ಇದು ಸೇಡಿನ ರಾಜಕಾರಣವಲ್ಲದೇ ಬೇರೆ ಅಲ್ಲ. ಈ ರೀತಿ ಮಾಡಬಾರದು ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದರು.

lokesh

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

8 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

9 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

10 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

10 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

10 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

11 hours ago