ರಾಜ್ಯ

ಕಾಂಗ್ರೆಸ್ ಸಾಮಾಜಿಕ‌ ನ್ಯಾಯದ ಪರವಾಗಿದೆ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲ ಸಾಮಾಜಿಕ ಆರ್ಥಿಕ ಹಾಗೂ ಸಮಾಜಿಕ ನ್ಯಾಯವನ್ನು ಸಮಾಜದ‌ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದ ಪೂಜ್ಯ ಬಸವರಾಜಪ್ಪ ಅಪ್ಪಾ ಸ್ಮರಣಾರ್ಥ ಭವನದಲ್ಲಿ ನಡೆದ 935 ಪಾಲಿಕೆಯ ಪೌರಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ಪಾಲಿಕೆಯಿಂದ ನೇರ ವೇತನ ಪಾವತಿ ಆದೇಶ ಪತ್ರ ವಿತರಣೆ, ಗ್ರಾಮ ಆಡಳಿತ ಅಧಿಕಾರಿಗಳಿಗೆ ನೇಮಕಾತಿ ಪತ್ರ ಹಾಗೂ ಕ್ರೋಮ್ ಬುಕ್ ವಿತರಣೆ, ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಚಿವರು ಸಾಂಕೇತಿಕವಾಗಿ ನೇಮಕಾತಿ ಪತ್ರ ವಿತರಿಸಿದರು. ಜೊತೆಗೆ ಹೊಲಿಗೆ ಯಂತ್ರ ಹಾಗೂ ತ್ರಿಚಕ್ರ ವಾಹನಗಳ ವಿತರಣೆ ಮಾಡಿದರು.

“ಕಾಂಗ್ರೆಸ್ ಪಕ್ಷದ ಸಿದ್ದಾಂತ ಹಾಗೂ ಸರ್ಕಾರ ಬದ್ಧತೆಯಿಂದಾಗಿ ನಾವು ಇಂದು ನಿಮಗೆಲ್ಲ ನೇಮಕಾತಿ ಆದೇಶ ವಿತರಿಸಿ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಇಲ್ಲಿಂದ ನೀವೆಲ್ಲ ಮಹಾನಗರ ಪಾಲಿಕೆಯ ನೌಕರರಾಗಿರುತ್ತೀರಿ.‌ಇದು ಅತ್ಯಂತ ಸಂತೋಷದ ಕ್ಷಣವಾಗಿದೆ” ಎಂದು ಸಚಿವರು ಹೇಳಿದರು.

“ಪೌರಕಾರ್ಮಿಕರು ಇದ್ದರೆ ನಗರವೆಲ್ಲ ಸ್ವಚ್ಛತೆಯಿಂದ ಇರಲು ಸಾಧ್ಯವಾಗುತ್ತದೆ. ನಿಮ್ಮೆಲ್ಲ ಕಷ್ಟಗಳ ನಡುವೆ ನಗರವನ್ನು ಸ್ವಚ್ಛವಾಗಿಡಲು ಕೆಲಸ ಮಾಡುತ್ತಿದ್ದೀರಿ ನಿಮಗೆಲ್ಲ ಧನ್ಯವಾದಗಳು ಎಂದು ಕೊಂಡಾಡಿದ ಸಚಿವರು 64 ಗ್ರಾಮಸೇವಕರ ನೇಮಕಾತಿ ಮಾಡಿ ಗ್ರಾಮ ಸೇವಕರಿಗೆ ತಂತ್ರಾಂಶ ದಾಖಲಿಸಲು ಅನುಕೂಲವಾಗಲೆಂದು 154 ಕ್ರೊಮ್ ಬುಕ್‌ ವಿತರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಇದೇ ಮೊದಲಬಾರಿಗೆ ಇಂತಹ ಸೌಲಭ್ಯ ಒದಗಿಸಲಾಗಿದೆ” ಎಂದರು.

ಪೌರಕಾರ್ಮಿಕರಿಗೆ ಭವನ ನಿರ್ಮಾಣ ಮಾಡುವಂತೆ ಇದಕ್ಕೂ ಮುನ್ನ ಮಾತನಾಡಿ ಕಮಕನೂರು ಮಾಡಿದ ಮನವಿಗೆ ಸ್ಪಂದಿಸಿದ ಸಚಿವರು, ನಗರದಲ್ಲಿ ಸಿಎ ಸೈಟ್ ಒದಗಿಸಿದರೆ ತಾವು ಅನುದಾನ ನೀಡುವುದಾಗಿ ಎಂದು ಘೋಷಿಸಿದ ಪ್ರಿಯಾಂಕ್ ಖರ್ಗೆ, ಶಾಸಕರು ಹಾಗೂ ಸಂಸದರು ಕೂಡಾ ಅನುದಾನ ಒದಗಿಸಲಿ ಎಂದು ಮನವಿ ಮಾಡಿದರು.

ಕೇಂದ್ರ ಸರ್ಕಾರ ಕಲಬುರಗಿ ಯನ್ನು ಸ್ಮಾರ್ಟ್ ಸಿಟಿ ಮಾಡಲು ನಿರಾಕರಿಸಿತು. ಆದರೆ ರಾಜ್ಯ ಸರಕಾರ ಕಲಬುರಗಿ ಯನ್ನು ಮುಂದಿನ 25 ವರ್ಷಕ್ಕೆ ಹೇಗಿರಬೇಕೋ ಹಾಗೆ ಸುಂದರ ನಗರವನ್ನಾಗಿ ಮಾಡಲು IIHS ( Indian Institute for Human Settlements) ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡು ಈಗಾಗಲೇ ನೀಲನಕ್ಷೆ ತಯಾರಿಸಲಾಗಿದ್ದು ಮುಂದಿನ ಮೂರು ವರ್ಷದಲ್ಲಿ ನವ ಕಲಬುರಗಿ ನಿರ್ಮಾಣ ಮಾಡಲಾಗುವುದು.

ಇದರ ಜೊತೆಗೆ 23 ಸರ್ಕಲ್ ಗಳ ಮರುನಿರ್ಮಾಣ, 31 ಉದ್ಯಾನವನ ಅಭಿವೃದ್ದಿ ಹಾಗೂ 4 ಕೆರೆಗಳನ್ನು ಅಭಿವೃದ್ದಿಪಡಿಸಲಾಗುವುದು. ನಗರದ ಎಲ್ಲ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು ಕಲಬುರಗಿಯಲ್ಲಿ ಬೇಕಾಗುವ ಅಗತ್ಯ ಮೂಲಭೂತ ಸೌಲಭ್ಯ ಸೇರಿದಂತೆ ಇತರೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುತ್ತಿದೆ ಎಂದರು.

ನಗರದ ವಾಜಪೇಯಿ ಬಡಾವಣೆಯಲ್ಲಿ “ನೈಸ್” ( NICE- Nagavi Institute of Competitive Exams) ತರಬೇತಿ ಕೇಂದ್ರವನ್ನು ಸ್ಥಾಪಿಸಲಾಗುತ್ತಿದ್ದು ಮುಂದಿನ ಜುಲೈ ಕೊನೆಯ ವಾರದಲ್ಲಿ ಉದ್ಘಾಟನೆ ಮಾಡಲಾಗುವುದು. ಮೊದಲಿಗೆ 500 ಜನ ಐಎಎಸ್, ಕೆ ಎ ಎಸ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುವುದು. ಮುಂದೆ 2000 ಅಭ್ಯರ್ಥಿಗಳಿಗೆ ತರಬೇತಿ‌ ನೀಡುವ ಗುರಿ ಹೊಂದಲಾಗಿದೆ ಎಂದರು.

ಬಿಜೆಪಿ ನಾಯಕರು ನನ್ನನ್ನು ಟೀಕಿಸಲು ಕಲಬುರಗಿ ಗೆ ನಾಲ್ಕು ಸಲ ಬಂದಿದ್ದಾರೆ. ನಮ್ಮ ಸರ್ಕಾರದಿಂದ ಆಗಬೇಕಾದ ಅಭಿವೃದ್ದಿ ಕೆಲಸಗಳ ಬಗ್ಗೆ ಅವರು ಚರ್ಚಿಸುವ ಬದಲು ನನ್ನ ಮೇಲೆ ವೈಯಕ್ತಿಕ ಟೀಕೆ ಮಾಡುತ್ತಿದ್ದಾರೆ.

ತಮ್ಮ ಉದ್ದೇಶಿತ ಅಮೇರಿಕಾ ಪ್ರವಾಸಕ್ಕೆ ಕೇಂದ್ರ ಅನುಮತಿ ನಿರಾಕರಿಸಿದ ವಿಚಾರವನ್ನು ಪ್ರಸ್ತಾಪಿಸಿದ ಸಚಿವರು, ಕೇಂದ್ರ ವೈಯಕ್ತಿಕವಾಗಿ ತಮಗೆ ಅವಕಾಶ ನಿರಾಕರಿಸಿಲ್ಲ, ರಾಜ್ಯದ ಸಚಿವರಿಗೆ ನಿರಾಕರಿಸಿದ್ದಾರೆ ಇದರಿಂದ ರಾಜ್ಯಕ್ಕೆ ನಿರೀಕ್ಷಿತ ಬಂಡವಾಳ ಬರುವುದು ನಿಂತುಹೋಗಿದೆ. ಬಿಜೆಪಿವರಿಗೆ ನನ್ನ ಮೇಲೆ ಯಾಕೋ ಪ್ರೀತಿ ಜಾಸ್ತಿಯಾಗಿದೆ ಅದಕ್ಕಾಗಿ ಹೀಗೆ ಮಾಡಿರಬಹುದು ಎಂದರು.

ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷ ಕಾಳಜಿಯಿಂದಾಗಿ ಪೌರಕಾರ್ಮಿಕರು ಗುತ್ತಿಗೆ ಪದ್ದತಿಯಿಂದ ಪಾಲಿಕೆಯ ನೌಕರರಂತೆ ನೇರ ನೇಮಕಾತಿ ಹೊಂದಿ ಸಂಬಳ ತೆಗೆದುಕೊಳ್ಳುತ್ತಾರೆ ಎಂದರು.

ಕಲಬುರಗಿ ನಗರದಲ್ಲಿ ಪೌರಕಾರ್ಮಿಕರಿಗಾಗಿ ಭವನ ನಿರ್ಮಾಣಕ್ಕಾಗಿ ಅಗತ್ಯ ಅನುದಾನ ಒದಗಿಸುವಂತೆ ಸಚಿವರಿಗೆ ಒತ್ತಾಯಿಸಿದ ಕಮಕನೂರು ಅವರು ಎಂ ಪಿ ರಾಧಾಕೃಷ್ಣ ದೊಡ್ಡಮನಿ ಅವರು ಕಬ್ಬಲಿಗ ಸಮಾಜವನ್ನು ಎಸ್ ಟಿ ಪಟ್ಟಿಗೆ ಸೇರಿಸುವಂತೆ ಕೇಂದ್ರವನ್ನು ಸಂಸತ್ತಿನಲ್ಲಿ ಒತ್ತಾಯಿಸುವಂತೆ ಮನವಿ ಮಾಡಿದರು.

ವೇದಿಕೆಯ ಮೇಲೆ ಪೂಜ್ಯ ಮಹಾಪೌರ ಯಲ್ಲಪ್ಪ ನಾಯಕೋಡಿ, ಲೋಕಸಭಾ ಸದಸ್ಯರಾದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ತಿಪ್ಪಣ್ಣಪ್ಪ ಕಮಕನೂರು, ಬಾಬುರಾವ್ ಚಿಂಚನಸೂರು, ಕುಡಾ ಅಧ್ಯಕ್ಷ ಮಜರ್ ಆಲಂ‌ಖಾನ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜಿಪಂ ಸಿಇಒ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಕಮಿಷನರ್ ಅವಿನಾಶ್ ಶಿಂಧೆ, ಸಚಿನ್ ಶಿರವಾಳ ಸೇರಿದಂತೆ ಹಲವರಿದ್ದರು.

ಆಂದೋಲನ ಡೆಸ್ಕ್

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

1 hour ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

4 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

5 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

5 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

5 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

5 hours ago