ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ ಇದ್ದು, ಇದನ್ನು ಬಿಜೆಪಿ ಮೇಲೆ ಹೊರಿಸುವ ಪ್ರಯತ್ನವನ್ನು ಕಾಂಗ್ರೆಸ್‌ನ ಹಿರಿಯ ನಾಯಕರು ವ್ಯವಸ್ಥಿತವಾಗಿ ಮಾಡುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಇಂದು (ಮೇ.೧೫)ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ರೇವಣ್ಣ ಅವರನ್ನು ಎಫ್‌ಐಆರ್ ದಾಖಲಾಗುತ್ತಿದ್ದಂತೆ ಕೂಡಲೇ ಬಂಧಿಸಿದ್ದರೂ, ಆದರೆ ಕಾರು ಚಾಲಕನನ್ನು ಮಾತ್ರ ಬಂಧಿಸಿಲ್ಲ. ಎಸ್ಐಟಿ ಅಧಿಕಾರಿಗಳು ಪಕ್ಷಪಾತ ಧೋರಣೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದರು.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದಂತೆ ಇಲ್ಲಿ ತಿಮಿಂಗಿಲವೇ ಇದೆ. ಅದನ್ನು ಬಡಿದು ತಿನ್ನಬೇಕಾ ಬೇಡವಾ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ತೀರ್ಮಾನಿಸಲಿದೆ. ಆದರೆ ಮಾಜಿ ಪ್ರಧಾನಿ ದೇವೇಗೌಡರಿಗೆ ಈ ವಯಸ್ಸಿನಲ್ಲಿ ನೋವು ಕೊಡಬೇಕಿತ್ತಾ ಎಂದು ಒಕ್ಕಲಿಗರು ಮಾತಾಡುತ್ತಿದ್ದಾರೆ. ಆದ್ದರಿಂದ ಈ ಪ್ರಕರಣವನ್ನು ಬಿಜೆಪಿಯ ಮೇಲೆ ಹೊರಿಸುವ ಪ್ರಯತ್ನ ನಡೆದಿದೆ ಎಂದರು.
ಎಸ್‌ಐಟಿ ಅಧಿಕಾರಿಗಳು ಕಾಂಗ್ರೆಸ್ ನಾಯಕರು ಹೇಳಿದಂತೆ ಕೇಳುತ್ತಿದ್ದಾರೆ. ಆದ್ದರಿಂದ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಆ ನಂತರ ಯಾರೆಲ್ಲ ಬಂಧನಕ್ಕೊಳಗಾಗುತ್ತಾರೆ ಎಂದು ಗೊತ್ತಾಗಲಿದೆ. ಕಾರು ಚಾಲಕ ಎಲ್ಲೋ ನಿಂತು ಸಂದೇಶ ಕಳುಹಿಸುತ್ತಿದ್ದಾನೆ. ಹಾಸನದಲ್ಲಿ ಎಲ್ಲ ಕಡೆ ಪೆನ್‌ಡ್ರೈವ್ ಹಂಚಲಾಗಿದೆ ಎಂದ ಮೇಲೆ ಅದು ಬಿಜೆಪಿ ಕಾರ್ಯಕರ್ತರಿಗೆ ತಲುಪಿರಬಹುದು. ಆದರೆ ಕಾಂಗ್ರೆಸ್ ಕಾರ್ಯಕರ್ತರ ಬಳಿಯೂ ವೀಡಿಯೋ ಇದೆ ಎಂದರು.
ಮಾಜಿ ಸಚಿವ ರೇವಣ್ಣ ಜೈಲಿಗೆ ಹೋದಾಗ ಕಾಂಗ್ರೆಸ್ ನಾಯಕರು ಹೆಚ್ಚು ಖುಷಿ ಪಟ್ಟಿದ್ದಾರೆ. ಇದು ವ್ಯವಸ್ಥಿತ ಸಂಚಾಗಿದ್ದು, ಎಲ್ಲರೂ ಟೀಮ್ ಮಾಡಿಕೊಂಡಿದ್ದಾರೆ. ಚುನಾವಣೆಯ ದೃಷ್ಟಿಯಿಂದ ಈ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…
ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…
ನವದೆಹಲಿ: ಡಿಜಿಟಲ್ ವಹಿವಾಟುಗಳನ್ನು ಹೆಚ್ಚು ಸುರಕ್ಷಿತಗೊಳಿಸಲು ಹಾಗೂ ವಂಚನೆಗಳನ್ನು ತಡೆಯುವ ಉದ್ದೇಸದಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಮಾರ್ಗಸೂಚಿ…