ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಯಾರೋ ಒಬ್ಬರ ಸ್ವತ್ತಲ್ಲ. ಅವರು ಎಲ್ಲ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಿದ್ದರು. ಆದರೆ ಕಾಂಗ್ರೆಸ್ ಕೆಂಪೇಗೌಡರ ಸಮುದಾಯವನ್ನೇ ಒಂದಾಗಿರಲು ಬಿಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು.
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರ್.ಅಶೋಕ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಒಕ್ಕಲಿಗ ಸಮುದಾಯದ ಪ್ರಶ್ನಾತೀತ ನಾಯಕರು. ಕೆಂಪೇಗೌಡ ಜಯಂತಿಗೆ ಅವರನ್ನು ಗೌರವದಿಂದ ಆಹ್ವಾನಿಸಬೇಕಿತ್ತು. ಈ ಜಯಂತಿ ರಾಜಕೀಯಕ್ಕೆ ವೇದಿಕೆಯಾಗಬಾರದು. ಇದು ಕಾಂಗ್ರೆಸ್ ಸರ್ಕಾರದ ದ್ವೇಷದ ರಾಜಕಾರಣವಾಗಿದೆ. ಈ ಜಯಂತಿ ಆಚರಣೆಯನ್ನು ಜನರ ದುಡ್ಡಿನಿಂದ ಮಾಡಲಾಗುತ್ತಿದೆ. ಇಂತಹ ಕಾರ್ಯಕ್ರಮಕ್ಕೆ ಸಮುದಾಯದ ಎಲ್ಲ ಹಿರಿಯರನ್ನು ಆಹ್ವಾನಿಸಬೇಕು ಎಂದರು.
ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಿರ್ಮಿಸಿದ ಮಹಾನ್ ನಾಯಕರು. ಕೆರೆ, ಪೇಟೆಗಳನ್ನು ನಿರ್ಮಿಸಿ ಅಭಿವೃದ್ಧಿಯಿಂದ ಜನರನ್ನು ಗೆದ್ದಿದ್ದರು. ಹಿಂದಿನ ಬಿಜೆಪಿ ಸರ್ಕಾರದಲ್ಲಿ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆ ನಿರ್ಮಿಸಲಾಯಿತು. ವಿಧಾನಸೌಧದ ಮುಂಭಾಗ ಈವರೆಗೆ ಕೆಂಪೇಗೌಡರ ಪ್ರತಿಮೆ ಇರಲಿಲ್ಲ. ನಾನು ಸಚಿವನಾಗಿದ್ದಾಗ, ಅಂದಿನ ಸಚಿವ ಅಶ್ವತ್ಥನಾರಾಯಣ ಅವರೊಂದಿಗೆ ಅಶ್ವಾರೋಹಿ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿದೆ. ಪೂರ್ವಜರನ್ನು ನೆನಪಿಸುವ ಕೆಲಸ ಸದಾ ನಡೆಯಬೇಕು ಎಂದು ಹೇಳಿದರು.
ಶಾಲಾ ಪಠ್ಯಗಳಲ್ಲಿ ಹೆಚ್ಚಾಗಿ ಕೆಂಪೇಗೌಡರ ಚರಿತ್ರೆ ದಾಖಲಾದರೆ ಮಕ್ಕಳಿಗೆ ಹೆಚ್ಚು ಮಾಹಿತಿ ದೊರೆಯುತ್ತದೆ ಎಂದು ಹೇಳಿದರು.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…