ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ನಿಂದ ಆಚೆ ಹೋದರೆ, ಕಾಂಗ್ರೆಸ್‌ಗೆ ಸಂಕಷ್ಟ ತಪ್ಪಿದ್ದಲ್ಲ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಮುಟ್ಟುವುದು ಕಷ್ಟ. ಸಿಎಂ ಕಾಂಗ್ರೆಸ್‌ನಲ್ಲಿದ್ರೆ 135 ಸೀಟು, ಆಚೆ ಹೋದರೆ ಕಾಂಗ್ರೆಸ್ ಶೂನ್ಯವಾಗಲಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನ ನಡೆಯುತ್ತಿದೆ. ಅವರನ್ನು ಇಳಿಸಿದರೆ, ರಾಜ್ಯ ಕಾಂಗ್ರೆಸ್‌ನಲ್ಲಿ ಏನಾಗುತ್ತದೆ ಎಂದು ಹೈಕಮಾಂಡ್‌ಗೆ ತಿಳಿದಿಲ್ಲ. ಡಿಸಿಎಂ ಡಿಕೆ ಶಿವಕುಮಾರ್ ಅವರೇ ಸಿದ್ದರಾಮಯ್ಯ ಅವರಿಗೆ ಮಗ್ಗಲ ಮುಳ್ಳು ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಅವರ ಶಕ್ತಿಯನ್ನು ಹತ್ತಿರದಿಂದ ನೋಡಿದ್ದೇನೆ. ಅವರ ಜೊತೆ ಐದು ವರ್ಷ ಕೆಲಸ ಮಾಡಿದ್ದೇನೆ. ಅವರ ಒಂದು ಮಾತಿಗೆ 10 ಲಕ್ಷ ಜನ ಸೇರುತ್ತಾರೆ ಎಂದರು.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಬೇಕು ಅಂತ ಕಾಂಗ್ರೆಸ್‌ನ ಹಲವು ನಾಯಕರು ಕಾಯುತ್ತಿದ್ದಾರೆ. ಒಂದು ವೇಳೆ ಕೇಜ್ರಿವಾಲ್ ರೀತಿ ಸಿದ್ದರಾಮಯ್ಯ ಅವರು ಬಂಧನಕ್ಕೆ ಒಳಗಾದರೆ, ಮತ್ತೊಮ್ಮೆ ಚುನಾವಣೆ ಬರುತ್ತೆ. ಹಾಗಾಗಿ ನಮ್ಮ ಪಕ್ಷದಲ್ಲಿ ಎಲ್ಲರೂ ಒಗ್ಗಟಾಗಬೇಕು ಎಂದು ತಿಳಿಸಿದರು.
ರಾಜ್‌ಕೋಟ್ : ಡೆರಿಲ್ ಮಿಚೆಲ್ ಅಮೋಘ ಶತಕ (131) ಹಾಗೂ ವಿಲ್ ಯಂಗ್ (87) ಅರ್ಧಶತಕದ ನೆರವಿನಿಂದ ಆತಿಥೇಯ ಭಾರತ…
ಮೈಸೂರು : ನಗರದ ಹೃದಯ ಭಾಗವಾದ ಕೆ.ಆರ್.ವೃತ್ತದಲ್ಲಿ ಗಂಧದಗುಡಿ ಫೌಂಡೇಶನ್ ಮತ್ತು ನಗರ ಸಂಚಾರ ಪೊಲೀಸ್ ಸಂಯುಕ್ತಾಶ್ರಯದಲ್ಲಿ ಸಂಕ್ರಾಂತಿ ಹಬ್ಬದ…
ಬೆಂಗಳೂರು : ಬ್ಯಾನರ್ ಅಳವಡಿಕೆ ಸಂಬಂಧಪಟ್ಟ ಬಳ್ಳಾರಿಯಲ್ಲಿ ನಡೆದ ಗಲಭೆ ಖಂಡಿಸಿ ಪಾದಯಾತ್ರೆ ನಡೆಸುವ ವಿಷಯದಲ್ಲಿ ಬಿಜೆಪಿಯೊಳಗೆ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ.…
ಮೈಸೂರು: ವರ್ಕ್ ಫ್ರಂ ಹೋಂ ಕೆಲಸಕ್ಕೆ ಸೇರಿದ ಮಹಿಳೆ ನಂತರ ನಕಲಿ ಕಂಪೆನಿಯವರ ಮಾತನ್ನು ಕೇಳಿ ಷೇರು ಮಾರುಕಟ್ಟೆಯಲ್ಲಿ ಹಣ…
ಮೈಸೂರು : ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಳವಾಡಿ ಹಾಗೂ ಕಡಕೊಳ ಬಳಿ ನಡೆದಿದೆ. ಮೊದಲನೇ…
ಮೈಸೂರು : ವರ್ಷದ ಮೊದಲ ಹಬ್ಬ ಸುಗ್ಗಿ ಸಂಕ್ರಾತಿ ಹಿನ್ನೆಲೆ ನಗರದಲ್ಲಿ ಸಂಭ್ರಮ ಮನೆ ಮಾಡಿದ್ದು, ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ…