ರಾಜ್ಯ

ಒಂದು ದಿನವಾದರೂ ನನ್ನನ್ನು ಜೈಲಿಗೆ ಕಳಿಸಬೇಕೆಂದು ಕಾಂಗ್ರೆಸ್‌ ಸಂಚು ರೂಪಿಸುತ್ತಿದೆ: ಕುಮಾರಸ್ವಾಮಿ ಆರೋಪ

ನನ್ನ ರಾಜೀನಾಮೆ ಕೇಳುವ ನೈತಿಕತೆ ಇವರಿಗೆ ಇಲ್ಲ: ಎಚ್‌ಡಿಕೆ

ಬೆಂಗಳೂರು:  ಕಾಂಗ್ರೆಸ್ ಸರ್ಕಾರದ ಸಚಿವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇವರಿಗೆ ನನ್ನ ರಾಜೀನಾಮೆ ಕೇಳುವ, ನನ್ನ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದರು.

ಲೋಕಯುಕ್ತ ವಿಚಾರಣೆ ಮುಗಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ನನ್ನ ಪಾತ್ರ ಏನೂ ಇಲ್ಲ ಎಂಬುದು ದಾಖಲೆಗಳೇ ಹೇಳುತ್ತವೆ.  ಲೋಕಾಯುಕ್ತ ಅಧಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದೇನೆ.  ಕಾಂಗ್ರೆಸ್‌ ನವರ ಹಾಗೆ ನಾನು ಸರ್ಕಾರದ ಭೂಮಿ ಲೂಟಿ ಮಾಡಿಲ್ಲ. ಮೂಡಾ ಹಗರಣವನ್ನೇ ನೋಡಿದ್ದೀರಿ. ಕುಮಾರಸ್ವಾಮಿ ಯಾಕೆ ರಾಜಿನಾಮೆ ಕೊಡಬೇಕು? ಲೂಟಿ ಮಾಡಿರೋದು  ಕಾಂಗ್ರೆಸ್‌ ನವರು ಎಂದು  ಆಕ್ರೋಶ ವ್ಯಕ್ತಪಡಿಸಿದರು.

ನನ್ನನ್ನು ಒಂದು ದಿನವಾದರೂ ಜೈಲಿಗೆ ಕಳುಹಿಸಬೇಕು ಎಂದು ಹಿಂದಿನ ಐದು ವರ್ಷದ ಕಾಂಗ್ರೆಸ್ ಸರಕಾರದಲ್ಲಿ ಸಂಚು ರೂಪಿಸಿದ್ದರು. ಅವರ ಆಸೆ ಈಡೇರಲಿಲ್ಲ. ಯಾಕೆಂದರೆ ಆ ಸಂದರ್ಭದಲ್ಲಿಯೂ ದಿನವೂ ಕಾಂಗ್ರೆಸ್ ನಾಯಕರ ಭ್ರಷ್ಟ ಮುಖವನ್ನು ಬಯಲು ಮಾಡುತ್ತಿದ್ದೆ. ಇವನ ಕಾಟ ತಡೆಯಲು ಆಗುತ್ತಿಲ್ಲ, ಒಂದು ದಿನವಾದರೂ ಇವನನ್ನು ಜೈಲಿಗೆ ಕಳಿಸಬೇಕು ಎಂದು ಹೊಂಚು ಹಾಕಿದ್ದರು. ಆಗಲೂ ಇವರಿಗೆ ನನ್ನನ್ನು ಏನೂ ಮಾಡಲು ಆಗಲಿಲ್ಲ, ಈಗಲೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಈ ಸರ್ಕಾರದ ಕೆಲವು ಪೋಲಿಸರು ದರೋಡೆಕೋರರು
ನಾನೇನು ತಪ್ಪು ಮಾಡಿ ಇಲ್ಲಿಗೆ ಬಂದಿಲ್ಲ. ಸ್ವಯಂಪ್ರೇರಿತವಾಗಿ ಬಂದಿದ್ದೇನೆ. ನಾಳೆ (ಶನಿವಾರ) ಬೆಳಗ್ಗೆ 11 ಗಂಟೆಗೆ ದಾಖಲಾತಿಗಳನ್ನು ಬಿಡುಗಡೆ ಮಾಡುತ್ತೇನೆ. ಈ ಸರ್ಕಾರದಲ್ಲಿರುವ ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳು ದರೋಡೆಕೋರರು. ಆ ದಾಖಲೆಗಳನ್ನು ನೋಡಿದ ಮೇಲೆ ಈ ಸಚಿವರುಗಳು ನನ್ನ ಮಾತನಾಡಲಿ ಎಂದರು.

ಪೊಲೀಸ್‌ ಠಾಣೆಯಾದ ಡಿಜಿ ಕಚೇರಿ
ಇವರ ಆಡಳಿತದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿ ಹೇಗೆ ಕೆಲಸ ಮಾಡುತ್ತಿದೆ? ಒಂದು ಪೊಲೀಸ್ ಠಾಣೆಯಂತೆ ಕೆಲಸ ಮಾಡುತ್ತಿದೆ. ಕಳೆದ ಹಲವು ದಿನಗಳಿಂದ ಡಿಜಿ ಕಚೇರಿಗೆ ಹೆಣ್ಣುಮಕ್ಕಳನ್ನು ಕರೆಸಿಕೊಂಡು ಎಫ್ ಐಆರ್ ಹಾಕುತ್ತಿದ್ದಾರೆ ಎಂದು ಸಚಿವರು ದೂರಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago