ಮೈಸೂರು: ದೇಶದ ಐಕ್ಯತೆ, ಸ್ವಾತಂತ್ರ್ಯ, ಮತ್ತು ಸಮಗ್ರತೆ ಒಗ್ಗೂಡಿಸಿ ಹೋರಾಡಿದ ಕಾಂಗ್ರೆಸ್ ಪಕ್ಷವೂ ಯಾವತ್ತು ದೇಶ ಹೊಡೆಯುವ ಕೆಲಸ ಮಾಡಿಲ್ಲವೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ನಗರದಲ್ಲಿಂದು ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಸದ ಡಿ.ಕೆ. ಸುರೇಶ್ ಅವರು ಪ್ರತ್ಯೇಕ ದೇಶದ ಬಗ್ಗೆ ಮಾತನಾಡಿದ್ದು ತಪ್ಪು ಎಂದು ಕಾಂಗ್ರೆಸ್ ಪಕ್ಷದ ನಾಯಕರೆಲ್ಲರೂ ಹೇಳಿದ್ದಾರೆ. ಡಿ.ಕೆ. ಸುರೇಶ್ ಅಸಲಿಗೆ ಆ ಮಾತು ಹೇಳಿರುವುದು ಕೇಂದ್ರದ ಬಜೆಟ್ ನಲ್ಲಿ ಅನುದಾನ ಹಂಚಿಕೆಯಲ್ಲಿ ಆಗುತ್ತಿರುವ ತಾರತಮ್ಯದ ಅಸಮಾಧಾನದಿಂದ ಹೇಳಿಕೆಯನ್ನು ನೀಡಿದ್ದಾರೆ. ದೇಶ ಕಟ್ಟುವುದಕ್ಕಾಗಿ ಹೋರಾಡಿದ ಪಕ್ಷ ಕಾಂಗ್ರೆಸ್ ಎಂದು ಹೇಳಿದ್ದಾರೆ.
ಬಿಜೆಪಿಯವರ ಆಡಳಿತ ಕಾಲಾವಧಿಯಲ್ಲಿ ಅವರು ದೇಶಕ್ಕಾಗಿ ಹೋರಾಟ ನಡೆಸಿದ ನಿದರ್ಶನ ಎಂದಾದರೂ ಇದೆಯೇ? ಕಾಂಗ್ರೆಸ್ ಪಕ್ಷದೇಶ ಒಡೆಯುವ ಕೆಲಸ ಮಾಡಿರುವುದು ಯಾವಾಗ ಎಂದು ಪ್ರಶ್ನಿಸಿದ್ದಾರೆ.
ಮೋದಿ ಪ್ರಧಾನಿ ಅದಾಗಿನಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಆಗುತ್ತಿದೆ. ಬಿಜೆಪಿ ತನಿಖಾ ಸಂಸ್ಥೆಗಳನ್ನ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಸರ್ಕಾರ ಬೀಳಿಸುವುದು ಬಿಜೆಪಿಯ ಹುಟ್ಟುಗುಣ. ಬಿಜೆಪಿಗರಿಗೆ ಮೋದಿ ಎದುರು ಮಾತನಾಡುವ ಧೈರ್ಯವಿಲ್ಲ. ಪರಿಹಾರ ರೀಲಿಸ್ ಮಾಡಿದ್ದರೇ ಪ್ರತಿಭಟನೆ ಮಾಡುತ್ತಿರಲಿಲ್ಲ. ಬಿಜೆಪಿ ಮಾಡುವುದೆಲ್ಲಾ ಅಧರ್ಮದ ಕೆಲಸ. ನಾವು ಅನಿವಾರ್ಯವಾಗಿ ಪ್ರತಿಭಟನೆ ಮಾಡುತ್ತಿದದೇವೆ ಎಂದು ಟೀಕಿಸಿದ್ದಾರೆ.