ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೇರುವ ಮೂಲಕ ಸಿ.ಪಿ.ಯೋಗೇಶ್ವರ್ ಮೈತ್ರಿಗೆ ದ್ರೋಹ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಸಿಪಿವೈ ಕಾಂಗ್ರೆಸ್ ಪಕ್ಷ ಸೇರಿ ತಮ್ಮ ಜೀವನ ಹಾಳು ಮಾಡಿಕೊಂಡಿದ್ದಾರೆ. ಮೈತ್ರಿಗೆ ತೊಂದರೆ ಕೊಡಲು ಕಾಂಗ್ರೆಸ್ ಸೇರಿದ್ದಾರೆ. ಸಿಪಿವೈ ಪಕ್ಷ ಬಿಟ್ಟು ಹೋಗಿರುವುದರಿಂದ ಬಿಜೆಪಿಗೆ ಯಾವುದೇ ಸಮಸ್ಯೆಯಿಲ್ಲ. ಯಾವುದೇ ಕಾರಣಕ್ಕೂ ಮತ್ತೆ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ. ಚನ್ನಪಟ್ಟಣದಲ್ಲಿ ಜೆಡಿಎಸ್‌ನಿಂದ ಯಾರೇ ನಿಂತರೂ ಗೆಲ್ಲಿಸುತ್ತೇವೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.