ಬೆಂಗಳೂರು: ಕಾಂಗ್ರೆಸ್ ನಾಯಕ ಹಾಗೂ ತಂದೆಯವರಾದ ಮಲ್ಲಿಕಾರ್ಜುನ ಖರ್ಗೆ ಆರೋಗ್ಯವಾಗಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಮಲ್ಲಿಕಾರ್ಜುನ ಖರ್ಗೆ ಸ್ವಲ್ಪ ಅಸ್ವಸ್ಥರಾಗಿದ್ದರು.
ಆಗ ವೈದ್ಯಕೀಯ ತಂಡವು ಖರ್ಗೆ ಅವರನ್ನು ಪರೀಕ್ಷೆ ನಡೆಸಿದೆ. ರಕ್ತದೊತ್ತಡ ಅಲ್ಪ ಕಡಿಮೆಯಾಗಿರುವುದನ್ನು ಹೊರತುಪಡಿಸಿದರೆ ಬೇರೆ ಏನೂ ಇಲ್ಲ. ಅವರು ಆರೋಗ್ಯವಾಗಿದ್ದಾರೆ. ನಿಮ್ಮೆಲ್ಲರ ಕಾಳಜಿಗೆ ಕೃತಜ್ಞನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ದೃಢ ಸಂಕಲ್ಪ, ಹಿತೈಷಿಗಳ ಶುಭ ಹಾರೈಕೆಯಿಂದ ಅವರು ಮತ್ತಷ್ಟು ಪ್ರಬಲರಾಗಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ.