ರಾಜ್ಯ

ಮಲ್ಲಿಕಾರ್ಜುನ ಖರ್ಗೆ ಆರೋಗ್ಯವಾಗಿದ್ದಾರೆ: ಪುತ್ರ ಪ್ರಿಯಾಂಕ್‌ ಖರ್ಗೆ ಮಾಹಿತಿ

ಬೆಂಗಳೂರು: ಕಾಂಗ್ರೆಸ್‌ ನಾಯಕ ಹಾಗೂ ತಂದೆಯವರಾದ ಮಲ್ಲಿಕಾರ್ಜುನ ಖರ್ಗೆ ಆರೋಗ್ಯವಾಗಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಮಲ್ಲಿಕಾರ್ಜುನ ಖರ್ಗೆ ಸ್ವಲ್ಪ ಅಸ್ವಸ್ಥರಾಗಿದ್ದರು.

ಆಗ ವೈದ್ಯಕೀಯ ತಂಡವು ಖರ್ಗೆ ಅವರನ್ನು ಪರೀಕ್ಷೆ ನಡೆಸಿದೆ. ರಕ್ತದೊತ್ತಡ ಅಲ್ಪ ಕಡಿಮೆಯಾಗಿರುವುದನ್ನು ಹೊರತುಪಡಿಸಿದರೆ ಬೇರೆ ಏನೂ ಇಲ್ಲ. ಅವರು ಆರೋಗ್ಯವಾಗಿದ್ದಾರೆ. ನಿಮ್ಮೆಲ್ಲರ ಕಾಳಜಿಗೆ ಕೃತಜ್ಞನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ದೃಢ ಸಂಕಲ್ಪ, ಹಿತೈಷಿಗಳ ಶುಭ ಹಾರೈಕೆಯಿಂದ ಅವರು ಮತ್ತಷ್ಟು ಪ್ರಬಲರಾಗಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

49 mins ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

1 hour ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

2 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

2 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

3 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

3 hours ago