ಬೆಂಗಳೂರು: ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ ಗುಡುಗಿದ್ದಾರೆ.
ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧವೇ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಿದರೆ ಸುಮ್ಮನೆ ಇರುವುದಿಲ್ಲ. ಇದು ಸಾಧ್ಯವಾದರೆ ಜನರ ಜೊತೆ ನಿಂತು ಉಗ್ರ ಹೋರಾಟ ಮಾಡುತ್ತೇವೆ ಎಂದು ಸಿಎಂ ವಿರುದ್ಧ ಗುಡುಗಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿದ್ದರಾಮಯ್ಯನವರೇ, ನಿಮಗೆ ಕೂ ಮುಗಿತೀನಿ. ಎಷ್ಟು ವರ್ಷ ಆದರೂ ನೀವು ಮಾಜಿ ಆಗಲೇಬೇಕು. ನಮ್ಮ ತಟ್ಟೆಗೆ ಕೈ ಹಾಕಿದರೆ, ಜನರ ಜೊತೆಯಲ್ಲಿ ನಿಂತು ಹೋರಾಟ ಮಾಡುತ್ತೇವೆ ಎಂದು ತೀಕ್ಷ್ಣವಾಗಿ ಎಚ್ಚರಿಸಿದ್ದಾರೆ.
ಟೆಹರಾನ್: ಯುಎಸ್ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್ ಖಾರ್ಜ್ ವಾಯುನೆಲೆಯ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…
ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ಎಲ್‌ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ…
ಚಾಮರಾಜನಗರ: ಗೂಡ್ಸ್ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…
ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…
ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…
ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…