ಹುಬ್ಬಳ್ಳಿ: ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರೇ ಶಾಸಕರ ಖರೀದಿಗೆ ಮುಂದಾಗಿದ್ದಾರೆ. ಇದು ಬಹುಮತ ಕೊಟ್ಟ ಜನರಿಗೆ ದ್ರೋಹ ಬಗೆದಂತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆ ಮಾಡಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಶಾಸಕರ ಖರೀದಿಗೆ ಮುಂದಾಗಿದ್ದಾರೆ. ಜೈಲಿಗೆ ಹೋಗಿ ನನ್ನ ಪರ ಬನ್ನಿ ಎಂದಿದ್ದಾರೆ. ವೋಟಿಂಗ್ ಬಂದರೆ ಬೆಂಬಲ ಇರಲಿ ಎಂದು ಡಿಕೆಶಿ ಜೈಲಿಗೆ ಭೇಟಿ ಕೊಟ್ಟು ಶಾಸಕರಿಗೆ ಮನವಿ ಮಾಡಿದ್ದಾರೆ. ಈ ಮೂಲಕ ವೋಟಿಂಗ್‌ನಲ್ಲಿ ತಮ್ಮ ನಂಬರ್ ಜೋಡಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ಪೊಲೀಸ್ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಚೀಟಿ ನೀಡಿ ವರ್ಗಾವಣೆ ಮಾಡಿಸುತ್ತಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಪ್ರಚಂಡ ಬಹುತ ಕೊಟ್ಟ ಜನರಿಗೆ ದ್ರೋಹ ಬಗೆಯುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.





