Mysore
19
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಕಾಂಗ್ರೆಸ್‌ನವರು ನಕಲಿ ಹೋರಾಟಗಾರರು: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ನಡೆಸುತ್ತಿರುವ ಪ್ರತಿಭಟನೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ.

ಈ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರೆಲ್ಲರೂ ನಕಲಿ ಹಾಗೂ ಡೋಂಗಿ ಹೋರಾಟಗಾರರು ಎಂದು ಕಿಡಿಕಾರಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ನಾವು ನಕಲಿ ಅನುಯಾಯಿಗಳಲ್ಲ. ಸಂವಿಧಾನಕ್ಕೆ ಅಪಮಾನ ಆಗುವ ರೀತಿಯಲ್ಲಿ ನಾವು ನಡೆದುಕೊಂಡಿಲ್ಲ. ಕಾಂಗ್ರೆಸ್‌ನವರಿಗೆ ಯಾವುದೇ ಪ್ರತಿಭಟನೆ ನಡೆಸಲು ನೈತಿಕತೆ ಇಲ್ಲ. ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಉತ್ತರ ಕೊಡಲು ಸಿದ್ದರಾಮಯ್ಯರಿಗೂ ನೈತಿಕತೆ ಇಲ್ಲ. ಹಗರಣದ ಬಣ್ಣ ಬಯಲಾಗುತ್ತದೆ ಎಂದು ಸದನದ ದಾರಿ ತಪ್ಪಿಸುತ್ತಿದ್ದಾರೆ ಎಂದು ಗುಡುಗಿದರು.

ಇನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ರಾಜ್ಯಸಭೆಯಲ್ಲಿ ಬಿ.ಆರ್.ಅಂಬೇಡ್ಕರ್‌ ಅವರ ಕುರಿತು ಆಡಿದ ಮಾತುಗಳು ಭಾರೀ ಕೋಲಾಹಲಕ್ಕೆ ಕಾರಣವಾಗಿವೆ.

ಅಂಬೇಡ್ಕರ್‌ ಕುರಿತು ಅಮಿತ್‌ ಶಾ ಆಡಿದ ಅವಮಾನಕಾರಿ ಮಾತುಗಳನ್ನು ವಾಪಸ್‌ ಪಡೆಯಬೇಕು ಮತ್ತು ಸಂಪುಟದಿಂದ ಅವರನ್ನು ವಜಾ ಮಾಡಬೇಕು ಎಂದು ಇಂಡಿಯಾ ಒಕ್ಕೂಟ ಪ್ರಧಾನಿ ನರೇಂದ್ರ ಮೋದಿಗೆ ಒತ್ತಾಯಿಸಿವೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ನಕಲಿ ಹೋರಾಟಗಾರರು ಎಂದು ವ್ಯಂಗ್ಯವಾಡಿದ್ದಾರೆ.

 

Tags:
error: Content is protected !!