ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರೆಲ್ಲರೂ ನಕಲಿ ಹಾಗೂ ಡೋಂಗಿ ಹೋರಾಟಗಾರರು ಎಂದು ಕಿಡಿಕಾರಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ನಾವು ನಕಲಿ ಅನುಯಾಯಿಗಳಲ್ಲ. ಸಂವಿಧಾನಕ್ಕೆ ಅಪಮಾನ ಆಗುವ ರೀತಿಯಲ್ಲಿ ನಾವು ನಡೆದುಕೊಂಡಿಲ್ಲ. ಕಾಂಗ್ರೆಸ್‌ನವರಿಗೆ ಯಾವುದೇ ಪ್ರತಿಭಟನೆ ನಡೆಸಲು ನೈತಿಕತೆ ಇಲ್ಲ. ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಉತ್ತರ ಕೊಡಲು ಸಿದ್ದರಾಮಯ್ಯರಿಗೂ ನೈತಿಕತೆ ಇಲ್ಲ. ಹಗರಣದ ಬಣ್ಣ ಬಯಲಾಗುತ್ತದೆ ಎಂದು ಸದನದ ದಾರಿ ತಪ್ಪಿಸುತ್ತಿದ್ದಾರೆ ಎಂದು ಗುಡುಗಿದರು.
ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಬಿ.ಆರ್.ಅಂಬೇಡ್ಕರ್ ಅವರ ಕುರಿತು ಆಡಿದ ಮಾತುಗಳು ಭಾರೀ ಕೋಲಾಹಲಕ್ಕೆ ಕಾರಣವಾಗಿವೆ.
ಅಂಬೇಡ್ಕರ್ ಕುರಿತು ಅಮಿತ್ ಶಾ ಆಡಿದ ಅವಮಾನಕಾರಿ ಮಾತುಗಳನ್ನು ವಾಪಸ್ ಪಡೆಯಬೇಕು ಮತ್ತು ಸಂಪುಟದಿಂದ ಅವರನ್ನು ವಜಾ ಮಾಡಬೇಕು ಎಂದು ಇಂಡಿಯಾ ಒಕ್ಕೂಟ ಪ್ರಧಾನಿ ನರೇಂದ್ರ ಮೋದಿಗೆ ಒತ್ತಾಯಿಸಿವೆ.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಕಲಿ ಹೋರಾಟಗಾರರು ಎಂದು ವ್ಯಂಗ್ಯವಾಡಿದ್ದಾರೆ.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…