Mysore
21
mist

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಡಿಸೆಂಬರ್.‌9ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ 

ಬೆಂಗಳೂರು: ಬೆಳಗಾವಿ ಅಧಿವೇಶನದ ಹಿನ್ನೆಲೆಯಲ್ಲಿ ಡಿಸೆಂಬರ್.‌9ರ ಮಂಗಳವಾರ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ಮಂಗಳವಾರ ಸಂಜೆ ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಲ್‌ಪಿ ಸಭೆ ನಡೆಯಲಿದೆ.

ಈಗಾಗಲೇ ಬಣ ರಾಜಕೀಯದಿಂದ ಗೊಂದಲಕ್ಕೆ ಒಳಗಾಗಿರುವ ಕಾಂಗ್ರೆಸ್‌ ಶಾಸಕರು ಸಹಜವಾಗಿಯೇ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೆಚ್ಚಿನ ಮಾಹಿತಿ ಪಡೆಯುವ ಲೆಕ್ಕಾಚಾರದಲ್ಲಿ ಇದ್ದಂತಿದೆ.

ಬೆಳಗಾವಿ ಅಧಿವೇಶನದ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಪವರ್‌ ಶೇರಿಂಗ್‌ ಗೊಂದಲದ ಬಗ್ಗೆಯೂ ಮಹತ್ವದ ಚರ್ಚೆ ನಡೆಸುವ ಸಾಧ್ಯತೆ ಇದೆ.

Tags:
error: Content is protected !!