ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
ಜನವರಿ.28ರಂದು ಸಂಜೆ ಆರು ಗಂಟೆಗೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರ ಬರೆದುಕೊಟ್ಟ ಭಾಷಣ ಓದದೇ ಸದನದಿದ ನಿರ್ಗಮಿಸುವ ಘಟನೆ ನಡೆದಿದೆ. ರಾಜ್ಯಪಾಲರ ನಡೆ ವಿರುದ್ಧ ಆಡಳಿತ ಪಕ್ಷ ಕಾಂಗ್ರೆಸ್ ಕಾನೂನು ಹೋರಾಟಕ್ಕೆ ಮುಂದಾಗಿದೆ. ಈ ನಡುವೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.





