ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಂಜೆ ಆರು ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ಸಭೆಯಲ್ಲಿ ಜಾತಿ ಗಣತಿ, ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಕುರಿತಂತೆ ಹಲವು ವಿಚಾರಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯುವ ಸಾಧ್ಯತೆಯಿದೆ.
ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯದ ಅಭಿವೃದ್ಧಿ ಮಂತ್ರ ಪಠಿಸಿರುವ ಬಜೆಟ್ ಅನ್ನು ಅಧಿವೇಶನದಲ್ಲಿ ಸಮರ್ಥನೆ ಮಾಡಿಕೊಳ್ಳಲು ಇಂದು ನಡೆಯುವ ಸಭೆಯಲ್ಲಿ ಎಲ್ಲಾ ಶಾಸಕರಿಗೂ ಸೂಚನೆ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.





