Mysore
18
overcast clouds

Social Media

ಗುರುವಾರ, 25 ಡಿಸೆಂಬರ್ 2025
Light
Dark

ಕಾಂಗ್ರೆಸ್‌ನಿಂದ ಹಳೆ ಕೇಸ್‌ ರೀ ಓಪನ್‌ ಮಾಡಲು ಮಾಸ್ಟರ್‌ ಪ್ಲಾನ್‌

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ಪ್ರಾರಂಭವಾಗಿರುವ ಬೆನ್ನಲ್ಲೇ ರಾಜ್ಯ ರಾಜಕೀಯದ ವಾತಾವರಣವೂ ಸಹ ಸಂಘರ್ಷದ ಹಾದಿ ತುಳಿದಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಬಿಜೆಪಿ ನಾಯಕರನ್ನು ಬಗ್ಗು ಬಡಿಯಲು ಸೇರಿಗೆ ಸಾವಸೇರು ಎಂಬಂತೆ ಕಾಂಗ್ರೆಸ್‌ ಚಿಂತನೆ ನಡೆಸುತ್ತಿದೆ. ಹೀಗಾಗಿ ಬಿಜೆಪಿ ನಾಯಕರ ವಿರುದ್ಧ ಹಳೆ ಪ್ರಕರಣಗಳನ್ನು ರೀ ಓಪನ್‌ ಮಾಡಲು ತಂತ್ರಗಾರಿಕೆ ರೂಪಿಸಿದ್ದು, ಈಗಾಗಲೇ ಸರ್ಕಾರದ ಕಾನೂನು ವಿಭಾಗದಲ್ಲಿ ಮೂರು ಸುತ್ತಿನ ಸಭೆಯನ್ನು ಆಯೋಜಿಸಿ, ಈ ವಿಚಾರಗಳನ್ನು ಚರ್ಚೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಸಭೆಗಳನ್ನು ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಎ.ಎಸ್‌.ಪೊನ್ನಣ್ಣ ನೇತೃತ್ವದಲ್ಲಿ ನಡೆಸಲಾಗಿದೆ. ಸಭೆಯಲ್ಲಿ ಮುಖ್ಯವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧದ ಡಿನೋಟಿಫಿಕೇಶನ್‌ ಪ್ರಕರಣ ಹಾಗೂ ವಿರೋಧ ಪಕ್ಷದ ನಾಯಕ ಆರ್‌.ಅಶೊಕ್‌ ಅವರ ವಿರುದ್ಧದ ಪ್ರಕರಣ ಕುರಿತು ಚರ್ಚಿಸಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಕಾನೂನು ಘಟಕದ ಸದಸ್ಯರೊಬ್ಬರ ಮಾಹಿತಿ ಆಧಾರದ ಮೇಲೆ ಬಿಜೆಪಿ ಪಕ್ಷದ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ, ಬಿಜೆಪಿಯ ಹಿರಿಯ ಮುಖಂಡ ಸೇರಿದಂತೆ ಇನ್ನುಳಿದಂತೆ ಬಿಜೆಪಿಯ 22 ಪ್ರಬಲ ನಾಯಕರುಗಳಿಗೆ ಸಂಬಂಧಿಸಿದಂತೆ ಭೂವಿವಾದ ಪ್ರಕರಣಗಳನ್ನು ಪತ್ತೆಹಚ್ಚಲಾಗುವುದು ಎಂದು ತಿಳಿಸಿದ್ದಾರೆ.

 

Tags:
error: Content is protected !!