ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ಪ್ರಾರಂಭವಾಗಿರುವ ಬೆನ್ನಲ್ಲೇ ರಾಜ್ಯ ರಾಜಕೀಯದ ವಾತಾವರಣವೂ ಸಹ ಸಂಘರ್ಷದ ಹಾದಿ ತುಳಿದಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಬಿಜೆಪಿ ನಾಯಕರನ್ನು ಬಗ್ಗು ಬಡಿಯಲು ಸೇರಿಗೆ ಸಾವಸೇರು ಎಂಬಂತೆ ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ. ಹೀಗಾಗಿ ಬಿಜೆಪಿ ನಾಯಕರ ವಿರುದ್ಧ ಹಳೆ ಪ್ರಕರಣಗಳನ್ನು ರೀ ಓಪನ್ ಮಾಡಲು ತಂತ್ರಗಾರಿಕೆ ರೂಪಿಸಿದ್ದು, ಈಗಾಗಲೇ ಸರ್ಕಾರದ ಕಾನೂನು ವಿಭಾಗದಲ್ಲಿ ಮೂರು ಸುತ್ತಿನ ಸಭೆಯನ್ನು ಆಯೋಜಿಸಿ, ಈ ವಿಚಾರಗಳನ್ನು ಚರ್ಚೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಸಭೆಗಳನ್ನು ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ನೇತೃತ್ವದಲ್ಲಿ ನಡೆಸಲಾಗಿದೆ. ಸಭೆಯಲ್ಲಿ ಮುಖ್ಯವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧದ ಡಿನೋಟಿಫಿಕೇಶನ್ ಪ್ರಕರಣ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೊಕ್ ಅವರ ವಿರುದ್ಧದ ಪ್ರಕರಣ ಕುರಿತು ಚರ್ಚಿಸಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಕಾನೂನು ಘಟಕದ ಸದಸ್ಯರೊಬ್ಬರ ಮಾಹಿತಿ ಆಧಾರದ ಮೇಲೆ ಬಿಜೆಪಿ ಪಕ್ಷದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಬಿಜೆಪಿಯ ಹಿರಿಯ ಮುಖಂಡ ಸೇರಿದಂತೆ ಇನ್ನುಳಿದಂತೆ ಬಿಜೆಪಿಯ 22 ಪ್ರಬಲ ನಾಯಕರುಗಳಿಗೆ ಸಂಬಂಧಿಸಿದಂತೆ ಭೂವಿವಾದ ಪ್ರಕರಣಗಳನ್ನು ಪತ್ತೆಹಚ್ಚಲಾಗುವುದು ಎಂದು ತಿಳಿಸಿದ್ದಾರೆ.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…