Mysore
23
overcast clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

ಶಾಸಕ ಸಿ.ಪುಟ್ಟರಂಗಶೆಟ್ಟಿ ಪುತ್ರ ಚಾಮರಾಜು (42) ನಿಧನ

ಬೆಂಗಳೂರು: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರ ಪುತ್ರ ಚಾಮರಾಜು ನಿಧನರಾಗಿದ್ದಾರೆ.

ಮಧುಮೇಹದಿಂದ ಬಳಲುತ್ತಿದ್ದ ಚಾಮರಾಜು ಅವರು ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಚಾಮರಾಜು ಇಂದು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಚಾಮರಾಜು ಅವರ ನಿಧನದಿಂದ ಶಾಸಕ ಪುಟ್ಟರಂಗಶೆಟ್ಟಿ ಕುಟುಂಬ ದುಃಖದಲ್ಲಿ ಮುಳುಗಿದೆ. ಚಾಮರಾಜು ನಿಧನಕ್ಕೆ ರಾಜಕೀಯ ನಾಯಕರು ಕಂಬನಿ ಮಿಡಿದಿದ್ದು, ಸಂತಾಪ ಸೂಚಿಸಿದ್ದಾರೆ.

 

Tags:
error: Content is protected !!