ರಾಜ್ಯ

ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪಗೆ ತೀವ್ರ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಮತ್ತು ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯ ಸ್ಥಿತಿ ಕ್ಷಣಕ್ಷಣಕ್ಕೂ ಹದಗೆಡುತ್ತಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಹತ್ತು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಅವರು, ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ನುರಿತ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಶಾಸಕ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆ ರಾಜ್ಯದ ಹಿರಿಯ ನಾಯಕರು ಆಸ್ಪತ್ರೆಗೆ ಆಗಮಿಸಿ ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಆಸ್ಪತ್ರೆಯ ವಾತಾವರಣ ರಾಜಕೀಯ ನಾಯಕರ ಭೇಟಿ ಮೂಲಕ ಚೈತನ್ಯ ತುಂಬಿದೆ.

ದೇಶದ ಅತ್ಯಂತ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ದಾವಣಗೆರೆಯ ಕಾಂಗ್ರೆಸ್ ಶಾಸಕ 94 ವರ್ಷ ವಯಸ್ಸಿನ ಶಾಮನೂರು ಶಿವಶಂಕರಪ್ಪ ಅವರು, ಕೆಲ ದಿನಗಳ ಹಿಂದೆ ಹೃದಯ ಸಂಬಂಧಿ ಹಾಗೂ ಕಫದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪೊಲೀಸರ ಮೇಲೆ ಹಲ್ಲೆ: 20 ಜನರ ವಿರುದ್ಧ ಕೇಸ್‌ ದಾಖಲು

ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ…

5 hours ago

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

6 hours ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

7 hours ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

7 hours ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

9 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

9 hours ago